ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಂಗಳೂರು ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.
ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣಕ್ಕೆ ಸ್ಪಂಧಿಸಿದ ನಾವು ಸಿಐಡಿ ತನಿಖೆಗೆ ನೀಡಿದ್ದೇವೆ. ಸಿಐಡಿ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಮಂಗಳೂರು ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯ ದುರುದ್ದೇಶಗಳಿಂದ ಪ್ರತಿಪಕ್ಷಗಳು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಮುಂದಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.