ಜನವಸತಿ ಪ್ರದೇಶದಲ್ಲಿ ಸ್ಥಾಪನೆಯಾಗುತ್ತಿರುವ ಘಟಕಕ್ಕೆ ವಿರೋಧ

ಗುರುವಾರ, 4 ಅಕ್ಟೋಬರ್ 2018 (15:08 IST)
ಯಾವುದೇ ಪರವಾನಿಗೆಯಿಲ್ಲದೇ ಜನವಸತಿ ಪ್ರದೇಶದಲ್ಲಿ ಡಾಂಬರ್ ಸಂಗ್ರಹಣಾ ಘಟಕವನ್ನು ಸ್ಥಾಪಿಸುತ್ತಿರುವುದನ್ನು ವಿರೋಧಿಸಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬೈತಕೋಲ್ ನಿವಾಸಿಗಳು ಪ್ರತಿಭಟನೆ ನಡೆಸಿದರು.

ಬಂದರು ಇಲಾಖೆಯ ಕಚೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳನ್ನು ನಿವಾಸಿಗಳು ತರಾಟೆಗೆ ತೆಗೆದುಕೊಂಡರು. ನಗರದ ಬೈತಕೋಲ್ ಬಂದರು ಬಳಿಯ ಜನವಸತಿ ಪ್ರದೇಶದಲ್ಲಿ ಡಾಂಬರ್ ಸಂಗ್ರಹಣಾ ಘಟಕವನ್ನು ಯಾವುದೇ ಪರವಾನಿಗೆ ಇಲ್ಲದೇ ಕಸ್ಟರ್ ಎಂಬ ಖಾಸಗಿ ಕಂಪನಿ ಬಂದರು ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲಾಗಿ ಅನಧಿಕೃತವಾಗಿ ಘಟಕ ಸ್ಥಾಪನೆಗೆ ಕಾಮಗಾರಿಯನ್ನು ಪ್ರಾರಂಭಿಸಿದೆ. ಇದನ್ನು ಪ್ರಶ್ನಿಸಿದ ಸ್ಥಳೀಯ ನಿವಾಸಿಗರಿಗೆ ಬೆದರಿಕೆ ಒಡ್ಡಿದ್ದರು. ಈ ಕಾರಣದಿಂದ ತಕ್ಷಣ ಕಾಮಗಾರಿ ನಿಲ್ಲಿಸಬೇಕೆಂದು ಬೈತಕೋಲಿನ ನಿವಾಸಿಗಳು ಬಂದರು ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿದರು.

ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು ಪುನಃ ಕಾಮಗಾರಿ ಪ್ರಾರಂಭವಾದಲ್ಲಿ ಉಗ್ರ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ