ಚಾಮುಂಡಿ ದೇವಿ ದರ್ಶನಕ್ಕೆ ಡ್ರೆಸ್ಕೋಡ್ಗೆ ಆರ್ಡರ್

ಬುಧವಾರ, 28 ಡಿಸೆಂಬರ್ 2022 (08:15 IST)
ಮೈಸೂರು : ದೇವಸ್ಥಾನಗಳಲ್ಲಿ ಡ್ರೆಸ್ಕೋಡ್ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಡ್ರೆಸ್ಕೋಡ್ ಕಡ್ಡಾಯ ಮಾಡಬೇಕೆಂಬ ಕೂಗು ಜೋರಾಗಿದೆ.
 
ಈ ಬಗ್ಗೆ ಹಲವು ಮಹಿಳಾ ಸಂಘಟನೆಗಳು ಹಾಗೂ ಕನ್ನಡ ಪರ ಸಂಘಟನೆಗಳೂ ಕೂಡ ಧ್ವನಿಗೂಡಿಸಿವೆ. ರಾಜ್ಯದ ಹಾಗೂ ಹೊರ ರಾಜ್ಯದ ಪ್ರಮುಖ ದೇವಸ್ಥಾನಗಳ ಪ್ರವೇಶಕ್ಕೆ ವಸ್ತ್ರಸಂಹಿತೆ ಇದೆ. ಇದೇ ರೀತಿ ನಾಡದೇವತೆ ಚಾಮುಂಡಿ ದರ್ಶನಕ್ಕೂ ವಸ್ತ್ರಸಂಹಿತೆ ಜಾರಿ ಮಾಡುವಂತೆ ಆಗ್ರಹಿಸಲಾಗಿದೆ.

ಚಾಮುಂಡಿ ದೇವಸ್ಥಾನದಲ್ಲಿ ಈವರೆಗೂ ಯಾವುದೇ ಡ್ರೆಸ್ಕೋಡ್ ಇರಲಿಲ್ಲ. ಹೀಗಾಗಿ ದೇವಾಲಯಕ್ಕೆ ಬರುವ ಭಕ್ತರು ತಮಗಿಷ್ಟ ಬಂದ ಉಡುಪು ಧರಿಸಿ ದೇವಸ್ಥಾನಕ್ಕೆ ಬರುತ್ತಿದ್ರು. ಇದೀಗ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರಸಂಹಿತೆ ಕಡ್ಡಾಯಗೊಳಿಸುವಂತೆ ಮೈಸೂರಿನ ಹಲವು ಮಹಿಳಾ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಮನವಿ ಮಾಡ್ತಿದ್ದಾರೆ. 

ದೇವಸ್ಥಾನಕ್ಕೆ ಬರುವ ಕೆಲವು ಮಹಿಳೆಯರು, ಯುವತಿಯರು ಅರೆಬರೆ ಬಟ್ಟೆ ಹಾಕಿಕೊಂಡು ಬರುತ್ತಾರೆ. ಪುರುಷರು ಅರ್ಧ ಚಡ್ಡಿ ಧರಿಸಿ ಬರುತ್ತಾರೆ. ಇದು ದೇವಸ್ಥಾನದ ಗೌರವ, ಪಾವಿತ್ರ್ಯತೆ ವಾತಾವರಣ ಹಾಳು ಮಾಡುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ