ಕರ್ನಾಟಕದ ದೇವಸ್ಥಾನಗಳಲ್ಲಿ ನಂದಿನಿ ತುಪ್ಪ ಬಳಕೆಗೆ ಆದೇಶ

Sampriya

ಶುಕ್ರವಾರ, 20 ಸೆಪ್ಟಂಬರ್ 2024 (19:30 IST)
Photo Courtesy X
ಬೆಂಗಳೂರು:  ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳು ಕೊಬ್ಬು ಬಳಕೆ ದೇಶದಾದ್ಯಂತ ಸದ್ದು ಮಾಡುತ್ತಿರುವ ಬೆನ್ನಲ್ಲೇ  ಕರ್ನಾಟಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಆದೇಶ ಹೊರಡಿಸಲಾಗಿದೆ.

ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸೂಚನೆಯ ಮೇರೆಗೆ ಸುತ್ತೋಲೆ ಹೊರಡಿಸಿರುವ ಧಾರ್ಮಿಕ ದತ್ತಿ ಇಲಾಖೆ, ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆ ಮತ್ತು ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಉಲ್ಲೇಖಿಸಲಾಗಿದೆ.

ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಅನ್ನೋದನ್ನು ಟಿಟಿಡಿ ಒಪ್ಪಿಕೊಂಡಿದೆ.

ಅದೇ ರೀತಿಯಾಗಿ ತಿರುಪತಿಯಲ್ಲಿ ತಯಾರಾಗುವ ಲಡ್ಡುವಿಗೆ ಬಳಸುವ ತುಪ್ಪದ ಮಾದರಿ ಪರೀಕ್ಷೆ ನಡೆಸಲಾಗಿದೆ. ಆ ತುಪ್ಪದಲ್ಲಿ ಮೀನಿನ ಎಣ್ಣೆ, ಪಾಮ್ ಆಯಿಲ್ ಪತ್ತೆಯಾಗಿದೆ. ಇದೀಗ ಈ ಸುದ್ದಿ ಭಾರೀ ಸಂಚಲನ ಮೂಡಿಸಿದ್ದು, ಈ ತುಪ್ಪದಲ್ಲಿ ದನದ ಮಾಂಸದಿಂದ ತೆಗೆದ ಕೊಬ್ಬು, ಹಂದಿ ಮಾಂಸದ ಪದರದಿಂದ ತೆಗೆದ ಬಿಳಿ ಕೊಬ್ಬು ತುಪ್ಪ ಇರುವುದು ಬೆಳಕಿಗೆ ಬಂದಿದೆ.

ಸದ್ಯ ಇದೀಗ ತಿರುಪತಿ ತಿಮ್ಮಪ್ಪನ ಲಡ್ಡು ತಯಾರಿಕೆಗೆ ಕರ್ನಾಟಕ ನಂದಿನಿ ತುಪ್ಪ ಹೋಗುತ್ತಿದೆ. ಆದರೆ ಜಗನ್ ರೆಡ್ಡೆ ಸರ್ಕಾರದ ಅವಧಿಯಲ್ಲಿ 4 ವರ್ಷ ನಂದಿನಿ ತುಪ್ಪ ತಿರುಪತಿಗೆ ಸರಬರಾಜು ಆಗಿರಲಿಲ್ಲ. ಹೀಗಾಗಿ ಇದಕ್ಕೂ ನಮಗೂ ಸಂಬಂಧ ಇಲ್ಲ ಎಂದು ನಿನ್ನೆ ಕೆಎಂಎಫ್​ ಅಧ್ಯಕ್ಷ ಭೀಮಾನಾಯ್ಕ್​ ಹೇಳಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ