ಮತ್ತೆ ಕಾವೇರಿ ನೀರು ಹರಿಸಲು ಆದೇಶ
ಕಾವೇರಿ ವಿಚಾರದಲ್ಲಿ ಮತ್ತೆ ಕರುನಾಡಿಗೆ ಹಿನ್ನಡೆಯಾಗಿದೆ. ನಿನ್ನೆ ನವದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆಸಿದ್ದು, ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ ಹೊರಡಿಸಿದೆ.. ಅಕ್ಟೋಬರ್ 16 ರಿಂದ ಅ.31ರವರೆಗೆ ನೀರು ಹರಿಸುವಂತೆ ಸೂಚನೆ ನೀಡಲಾಗಿದೆ. ಪ್ರತಿನಿತ್ಯ 16 ಸಾವಿರ ಕ್ಯೂಸೆಕ್ ನೀರಿಗೆ ತಮಿಳುನಾಡು ಬೇಡಿಕೆ ಇಟ್ಟಿತ್ತು. ಕಳೆದ ಬಾರಿ ತಮಿಳುನಾಡಿಗೆ 15 ದಿನ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸಮಿತಿ ಆದೇಶಿಸಿತ್ತು. ಸೆಪ್ಟೆಂಬರ್ 29ರಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ದಿನಕ್ಕೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಲಾಗಿತ್ತು. ಸದ್ಯ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಲಾಗಿದೆ.