5 ಸಾವಿರ ಕ್ಯೂಸೆಕ್​ ನೀರು ಹರಿಸುವಂತೆ ಆದೇಶ

ಗುರುವಾರ, 21 ಸೆಪ್ಟಂಬರ್ 2023 (15:00 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿದಿನ 5 ಸಾವಿರ ಕ್ಯೂಸೆಕ್​ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂ ಕೋರ್ಟ್​​​ ಕರ್ನಾಟಕಕ್ಕೆ ಆದೇಶಿಸಿದೆ. ಮುಂದಿನ 15 ದಿನಗಳವರೆಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್​ ನೀರನ್ನು ತಮಿಳುನಾಡಿಗೆ ಹರಿಸುವಂತೆ ನ್ಯಾಯಮೂರ್ತಿ B.R.ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶಿಸಿದೆ. ತಮಿಳುನಾಡು ಪರ ವಕೀಲರಾದ ಮುಕುಲ್​ ರೋಹಟಗಿ ಮತ್ತು ಕರ್ನಾಟಕದ ಪರ ವಕೀಲ ಶ್ಯಾಮ್​ ದಿವಾನ್​ ತಮ್ಮ-ತಮ್ಮ ವಾದವನ್ನು ಮಂಡಿಸಿದ್ರು. ಪ್ರಸ್ತುತ ನೀರಿನ ಸಂಕಷ್ಟ ಇದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಆದರೆ, ಸಂಕಷ್ಟ ಸೂತ್ರವನ್ನು ಕರ್ನಾಟಕ ಪಾಲಿಸುತ್ತಿಲ್ಲ. ನಾವು ಬಹಳಷ್ಟು ಕಡಿಮೆ ನೀರನ್ನು ಪಡೆಯುತ್ತಿದ್ದೇವೆ ಎಂದು ತಮಿಳುನಾಡು ಪರ ವಕೀಲ ಮುಕುಲ್​ ರೋಹಟಗಿ ವಾದ ಮಂಡಿಸಿದ್ರು.. ಕರ್ನಾಟಕ ಪರ ವಾದ ಮಂಡಿಸಿದ ಶ್ಯಾಮ್​ ದಿವಾನ್​, ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶವನ್ನು ನಾವು ಪಾಲಿಸಿದ್ದೇವೆ ಎಂದರು. ವಾದ-ವಿವಾದಗಳನ್ನು ಆಲಿಸಿದ ಬಳಿಕ B.R.ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ತಮಿಳುನಾಡಿಗೆ ನೀರು ಹರಿಸಲು ಆದೇಶ ಹೊರಡಿಸಿತು. ಈ ಮೂಲಕ ಕರ್ನಾಟಕಕ್ಕೆ ಸುಪ್ರೀಂಕೋರ್ಟ್​ನಲ್ಲೂ ಹಿನ್ನೆಡೆಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ