ಸಕ್ಕರೆ ಕಾರ್ಖಾನೆಗಳ ಮುಟ್ಟುಗೋಲಿಗೆ ಆದೇಶ: ರೈತರು ಖುಷ್

ಮಂಗಳವಾರ, 18 ಜೂನ್ 2019 (17:11 IST)
ಕಬ್ಬಿಗೆ ಬಾಕಿ ಪಾವತಿಸದೇ ಇರೋ ಕಾರ್ಖಾನೆಗಳ ಮುಟ್ಟುಗೋಲಿಗೆ ಆದೇಶ ನೀಡಿರುವುದು ಕಬ್ಬು ಬೆಳೆಗಾರರ ಸಂತಸಕ್ಕೆ ಕಾರಣವಾಗಿದೆ.

ಬೆಳಗಾವಿಯಲ್ಲಿ ರೈತರು ಕಷ್ಟಪಟ್ಟು ಬೆಳೆದ ಕಬ್ಬಿಗೆ ಬಾಕಿ ಪಾವತಿ ಮಾಡದೇ ಇರೋ ಕಾರ್ಖಾನೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಆದೇಶ ಹೊರಡಿಸಲಾಗಿದೆ.

ಬೆಳೆಗಾರರಿಗೆ ಕಬ್ಬಿನ ಬಾಕಿಹಣ ಪಾವತಿ ಮಾಡದಿರುವ ಸಕ್ಕರೆ ಕಾರ್ಖಾನೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ ಆದೇಶ ಮಾಡಿದ್ದಾರೆ. ಇದರಿಂದ ಕಬ್ಬು ಬೆಳೆಗಾರರು ಸಹಜವಾಗಿಯೇ ಸಂತಸ ವ್ಯಕ್ತಪಡಿಸಿದ್ದಾರೆ.

ಎಫ್.ಆರ್.ಸಿ ಪ್ರಕಾರ ರೈತರು ಬೆಳೆದ ಕಬ್ಬನ್ನು ಖರೀದಿಸಿ ದರ ಪಾವತಿ ಮಾಡದ ಕಾರಣಕ್ಕಾಗಿ ಸಕ್ಕರೆ ಕಾರ್ಖಾನೆಗಳ ಮುಟ್ಟಿಗೋಲಿಗೆ ಆದೇಶ ಮಾಡಲಾಗಿದೆ.

ಶಾಸಕರಾದ ಶ್ರೀಮಂತ ಪಾಟೀಲ ಮಾಲೀಕತ್ವದ ಅಥಣಿ ಶುಗರ್ಸ್, ಲಕ್ಷ್ಮಣ ಸವದಿ ಒಡೆತನದ ಕೃಷ್ಣಾ ಶುಗರ್ಸ್, ಭಾಗ್ಯಲಕ್ಷ್ಮೀ ಸಕ್ಕರೆ ಕಾರ್ಖಾನೆ, ರೇಣುಕಾ ಶುಗರ್ಸ್, ಉಮೇಶ ಕತ್ತಿ ಒಡೆತನದ ವಿಶ್ವರಾಜ ಶುಗರ್ಸ್ ಕಂಪನಿ, ಕೊಳವಿಯ ಗೋಕಾಕ್ ಶುಗರ್ಸ್, ಉಗಾರ ಶುಗರ್ಸ್, ಎಂ.ಕೆ ಹುಬ್ಬಳ್ಳಿ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ, ಬೈಲಹೊಂಗಲದ ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆ ಸೇರಿದಂತೆ 9 ಸಕ್ಕರೆ ಕಾರ್ಖಾನೆಗಳ ಮುಟ್ಟುಗೋಲಿಗೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ