ಕಂಬಳಕ್ಕೆ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರಕಾರ ಸಿದ್ಧತೆ

ಬುಧವಾರ, 25 ಜನವರಿ 2017 (13:13 IST)
ಕಂಬಳ‌‌ ಒಂದು ಗ್ರಾಮೀಣ ಕ್ರೀಡೆ. ಅದಕ್ಕೆ ನಮ್ಮ ವಿರೋಧವಿಲ್ಲ. ಅಗತ್ಯ ಬಿದ್ದರೆ ಸುಗ್ರೀವಾಜ್ಞೆ ಹೊರಡಿಸಲಾಗುವುದು. ಜೊತೆಗೆ ಫೆಬ್ರವರಿ 6ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು ಅಲ್ಲಿಯೂ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯವರು ತಿಳಿಸಿದರು.
 
ತಮಿಳುನಾಡಿನ ಜಾನಪದ ಕ್ರೀಡೆ ಜಲ್ಲಿಕಟ್ಟುಗೆ ಅಲ್ಲಿನ ಸರಕಾರ ಸುಗ್ರೀವಾಜ್ಞೆ ಹೊರಡಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಂಬಳ ಪರ ಹೋರಾಟ ನಡೆಯುತ್ತಿದೆ. ಈ ಕ್ರೀಡೆಗೂ ಅನುಮತಿ ನೀಡಬೇಕೆಂಬ ವಾದ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸುಗ್ರೀವಾಜ್ಞೆ ಹೊರಡಿಸುವುದಾಗಿ ತಿಳಿಸಿದ್ದಾರೆ.
 
 ಕರಾವಳಿ ಕರ್ನಾಟಕದ ಒಂದು ಜಾನಪದ ಕ್ರೀಡೆ. ದಷ್ಟ ಪುಷ್ಟವಾಗಿ ಬೆಳೆಸಿದ ಕೋಣಗಳನ್ನು ಹಸನಾಗಿ ಹದ ಮಾಡಿದ ಮಣ್ಣಿನ ಗದ್ದೆಯಲ್ಲಿ ಒಡಿಸುವ ಸ್ಪರ್ಧೆಯೇ ಕಂಬಳ. ದಕ್ಷಿಣ ಕನ್ನಡ ಮತ್ತು ಈಗಿನ ಉಡುಪಿ ಜಿಲ್ಲೆಯ ಜಾನಪದದೊಂದಿಗೆ ಹಾಸು ಹೊಕ್ಕಾಗಿದೆ ಈ ಕ್ರೀಡೆ. ಕರಾವಳಿಯ ರೈತಾಪಿ ಜನರು ಭತ್ತದ ಕೊಯಿಲಿನ ನಂತರ ತಮ್ಮ ಮನರಂಜನೆಗೋಸ್ಕರ ಏರ್ಪಡಿಸುತ್ತಿದ್ದ ಈ ಕ್ರೀಡೆ ಕಳೆದ ಅನೇಕ ವರ್ಷಗಳಿಂದ ಸಾಂಘಿಕ ಬಲದೊಂದಿಗೆ ಬೆಳೆಯುತ್ತಿದೆ. ಎರಡು ಕೋಣಗಳ ಕುತ್ತಿಗೆಗೆ ನೊಗ ಕಟ್ಟಿ ಅವುಗಳನ್ನು ಓಡಿಸಲಾಗುವ ಈ ಕ್ರೀಡೆಯಲ್ಲಿ ಕೋಣಗಳೊಂದಿಗೆ ಅವುಗಳನ್ನು ಓಡಿಸುವಾತನ ಪಾತ್ರವೂ ಮುಖ್ಯ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ