ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನಮ್ಮೆಲ್ಲರ ಗುರಿ: ಪರಮೇಶ್ವರ್
ಶುಕ್ರವಾರ, 14 ಏಪ್ರಿಲ್ 2017 (16:33 IST)
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನಮ್ಮೆಲ್ಲರ ಗುರಿಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿಂದು ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಕೇವಲ ದಲಿತರಿಗೆ ಸೇರಿದವರಲ್ಲ. ಪ್ರತಿಯೊಂದು ಧರ್ಮಕ್ಕೂ ಸೇರಿದವರಾಗಿದ್ದಾರೆ ಎಂದರು.
ಉಪಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿರುವುದಕ್ಕೆ ಸಂತಸವಾಗಿದೆ. ಕಾಂಗ್ರೆಸ್ ಮುಖಂಡರು ಒಗ್ಗಟ್ಟಿನಿಂದ ಪ್ರಚಾರಕ್ಕಿಳಿದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ 125ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸುವ ವಿಶ್ವಾಸವಿದೆ ಎಂದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸುವ ಕುರಿತಂತೆ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ.ಮುಂದಿನ ಚುನಾವಣೆಯಲ್ಲೂ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎನ್ನುವುದು ನನ್ನ ಬಯಕೆಯಾಗಿದೆ ಎಂದು ತಿಳಿಸಿದ್ದಾರೆ.
ಉಪಚುನಾವಣೆಯಲ್ಲಿ ಜಯಗಳಿಸಿದ ಗುಂಡ್ಲುಪೇಟೆ ಶಾಸಕಿ ಗೀತಾ ಮಹಾದೇವ್ ಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡುವುದು ಬಿಡುವುದು ಮುಖ್ಯಮಂತ್ರಿಯವರ ವಿವೇಚನೆಗೆ ಬಿಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.