ಬೆಂಗಳೂರು: ಪ್ರಕರಣದಲ್ಲಿ ಎಷ್ಟೇ ಪ್ರಭಾವಿಗಳು ಷಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗಳಿಗೆ ಒಪ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹೇಳಿಕೊಂಡಿದ್ದರು.
ಪತ್ರದಲ್ಲಿ ಸಂತ್ರಸ್ತರಿಗೆ ರಕ್ಷಣೆ ಕೊಡಬೇಕೆಂದ ಅವರು ಯಾರೇ ಆರೋಪಿಗಳಿದ್ದರು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಸಹೋದರ, ಮಗನಂತೆ ನೋಡಿಕೊಳ್ಳುತ್ತಿದ್ದ ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಅವರು ತುಂಬಾನೇ ಕ್ರೂರವಾಗಿ ನಡೆಸಿಕೊಂಡಿದ್ದಾರೆ ಎಂದು ಹೇಳಿದರು.
ಇದರ ಬೆನ್ನಲ್ಲೇ ಎಕ್ಸ್‌ನಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರ, ಅನ್ಯಾಯಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ನಿಷ್ಪಕ್ಷಪಾತ ತನಿಖೆ ನಡೆಸಿ ಪ್ರಕರಣದಲ್ಲಿ ಎಷ್ಟೇ ಪ್ರಭಾವಿಗಳು ಷಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗಳಿಗೆ ಒಪ್ಪಿಸಲಾಗುವುದು.
ನೊಂದವರ ಕಣ್ಣೀರು ಒರೆಸುವ ಜೊತೆಗೆ ಅವರ ನ್ಯಾಯದ ಹೋರಾಟದಲ್ಲಿ ನಮ್ಮ ಸರ್ಕಾರ ಜೊತೆ ನಿಲ್ಲಲಿದೆ ಎಂಬ ವಾಗ್ದಾನವನ್ನು @RahulGandhi ಅವರು ಸೇರಿದಂತೆ ನಾಡಿನ ಪ್ರತಿಯೊಬ್ಬರಿಗೂ ನೀಡುತ್ತಿದ್ದೇನೆ.