ನಮ್ಮ ಆದ್ಯತೆ 5 ಗ್ಯಾರಂಟಿಗಳನ್ನ ಜಾರಿ ಮಾಡುವುದಷ್ಟೇ : ಕೆ.ಎನ್ ರಾಜಣ್ಣ

ಸೋಮವಾರ, 17 ಜುಲೈ 2023 (09:56 IST)
ಹಾಸನ : ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ 5 ಗ್ಯಾರಂಟಿಗಳನ್ನ ಜಾರಿಗೆ ತರುವುದು ನಮ್ಮ ಮೊದಲ ಆದ್ಯತೆ ಎಂದು ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ.
 
ಬಜೆಟ್ನಲ್ಲಿ ಹಾಸನ ಜಿಲ್ಲೆಗೆ ಏನೂ ಸಿಗದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. 5 ಗ್ಯಾರಂಟಿಗಳನ್ನ ಘೋಷಣೆ ಮಾಡಿದ್ದೇವೆ. ಅದನ್ನ ಜಾರಿಗೊಳಿಸುವುದು ನಮ್ಮ ಮೊದಲ ಆದ್ಯತೆ. ಮುಂದಿನ ದಿನಗಳಲ್ಲಿ ಬೇರೆ ಕೆಲಸಗಳಿಗೆ ಆದ್ಯತೆ ನೀಡುತ್ತೇವೆ ಹೇಳಿದ್ದಾರೆ. 

ಗೃಹಲಕ್ಷ್ಮಿ ಯೋಜನೆ ರಾಜ್ಯದ ಜನರಿಗೆ ಭ್ರಮನಿರಸನ ತಂದಿದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿದ ಸಚಿವರು, ಬೊಮ್ಮಾಯಿ ಹೇಳುವುದನ್ನ ಏಕೆ ಕೇಳ್ತೀರಾ? ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನ ಆಯ್ಕೆ ಮಾಡಿಕೊಳ್ಳುವ ಯೋಗ್ಯತೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ