ಬೆಂಗಳೂರು : ಹಣಕಾಸಿನ ಇತಿಮಿತಿಗಳು ಹಾಗೂ ಅವಶ್ಯಕ ಖರ್ಚುಗಳನ್ನು ನಿಭಾಯಿಸುವುದರ ನಡುವೆ ಉತ್ತಮ ಬಜೆಟ್ ನೀಡುವ ಮೂಲಕ ಆರ್ಥಿಕ ಅಭಿವೃದ್ಧಿ ವೇಗ, ಜನಕಲ್ಯಾಣ, ಆರ್ಥಿಕ ಸ್ಥಿರತೆಯನ್ನು ಸಾಧಿಸುವ ವಾಸ್ತವಿಕತೆಯ ಆಯವ್ಯಯ ಮಂಡಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿಎಂ, ಆಯವ್ಯಯ ಎಂದರೆ ರಾಜ್ಯದ ಹಣಕಾಸಿನ ಸ್ಥಿತಿ. ಜನರ ಆಶೋತ್ತರಗಳನ್ನು ಈಡೇರಿಸುವ ಯೋಜನೆಗಳು, ಹಣಕಾಸಿನ ನಿರ್ವಹಣೆಯ ದಿಕ್ಸೂಚಿಯನ್ನು ತೋರಿಸುವ ಅಂದಾಜು. ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದ್ದರೆ, ರಾಜ್ಯದ ಆದಾಯ ಹೆಚ್ಚುತ್ತದೆ ಎಂದು ಹೇಳಿದರು.