ಕಲುಷಿತ ನೀರು ಸರಬರಾಜು ಮಾಡುತ್ತಿರುವ ಪುರಸಭೆ ವಿರುದ್ಧ ಆಕ್ರೋಶ

ಶುಕ್ರವಾರ, 14 ಸೆಪ್ಟಂಬರ್ 2018 (14:33 IST)
ಒಂದೆಡೆ ಕುಡಿಯುವ ನೀರಿಗೆ ತೀವ್ರ ಹಾಹಾಕಾರ ಎದುರಾಗಿದೆ. ಇನ್ನೊಂದು ಕಡೆ ಕಲುಷಿತ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಹೀಗಾಗಿ ಪುರಸಭೆ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ.

ಮಂಡ್ಯ ಜಿಲ್ಲೆಯ  ಕೃಷ್ಣರಾಜಪೇಟೆ ಪಟ್ಟಣದಲ್ಲಿ ಕುಡಿಯುವ ನೀರಿಗೆ ತೀವ್ರ ಹಾಹಾಕಾರ ಶುರುವಾಗಿದೆ. ಮತ್ತೊಂದು ಕಡೆ ಕಲುಷಿತ ನೀರನ್ನು ಸರಬರಾಜು ಮಾಡುತ್ತಿರುವ ಪುರಸಭೆಯ ವಾಟರ್   ಮ್ಯಾನ್ ಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ನೀರುನಿರ್ವಹಣೆಯ ಮುಖ್ಯ ವಾಲ್ ಒಡೆದು ಚರಂಡಿಯ ಕಲುಷಿತ ನೀರು ಮಿಶ್ರಣವಾಗುತ್ತಿದೆ. ಇದೇ ನೀರು ಕುಡಿಯುವುದಕ್ಕೆ ಪೂರೈಕೆಯಾಗುತ್ತಿದೆ. ಹೀಗಾಗಿ ಜನಸಾಮಾನ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದ್ದರೂ ಪುರಸಭೆಯ ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಜನರು ದೂರಿದ್ದಾರೆ.

ಸುಭಾಷ್ ನಗರ, ಅಂಬೇಡ್ಕರ್ ನಗರ, ಹೇಮಾವತಿ ಬಡಾವಣೆ ಹಾಗೂ ಜಯನಗರ ಬಡಾವಣೆಯಲ್ಲಿ ಕುಡಿಯುವ ನೀರಿಗೆ ತೀವ್ರ ಹಾಹಾಕಾರ ಉಂಟಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಕ್ರಮ ಕೈಗೊಂಡು ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಬೇಕು ಎಂದು ಪುರಸಭೆಯ ಸದಸ್ಯರಾದ ದಿನೇಶ್ ಮತ್ತು ಪ್ರೇಮಕುಮಾರ್ ಒತ್ತಾಯಿಸಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ