ದೇಶದಲ್ಲಿ ಕೊರೊನಾಗೆ 40 ಕ್ಕೂ ಹೆಚ್ಚು ಬಲಿ : ಮಹಾಮಾರಿ ಭೀತಿ ಹೆಚ್ಚಳ
ಮಂಗಳವಾರ, 31 ಮಾರ್ಚ್ 2020 (18:25 IST)
ಕೊರೊನಾ ವೈರಸ್ ತಡೆಗೆ ಲಾಕ್ ಡೌನ್ ಘೋಷಣೆ ಮಾಡಿದ್ದರೂ ಮಹಾಮಾರಿ ಇದುವರೆಗೂ ದೇಶದಲ್ಲಿ 40 ಕ್ಕೂ ಹೆಚ್ಚು ಜನರನ್ನು ಬಲಿ ಪಡೆದುಕೊಂಡಿದೆ.
ದೆಹಲಿಯಲ್ಲಿ ನಡೆದ ತಬ್ಲಿಘಿ ಜಮಾತ್ ಮಸೀದಿಯ ಸಭೆಯೊಂದರಲ್ಲಿ ಭಾಗಿಯಾಗಿದ್ದ 10 ಜನರು ಕೊರೊನಾ ವೈರಸ್ ನಿಂದಾಗಿ ವಿವಿಧೆಡೆ ಸಾವನ್ನಪ್ಪಿದ್ದಾರೆ ಎನ್ನಲಾಗ್ತಿದೆ.
ತೆಲಂಗಾಣ, ಕರ್ನಾಟಕ, ಕೇರಳ, ಗುಜರಾತ್, ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೊನಾ ವೈರಸ್ ನಿಂದ ಸಾವನ್ನಪ್ಪಿದವರ ಕೇಸ್ ಗಳು ವರದಿಯಾಗುತ್ತಿವೆ.
1334 ಜನರು ಮಾರಕ ಸೋಂಕಿನಿಂದಾಗಿ ಬಳಲುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ದೆಹಲಿಯಲ್ಲಿ ನಡೆದಿದ್ದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ 800 ಕ್ಕೂ ಹೆಚ್ಚು ಜನರನ್ನು ತಪಾಸಣೆ ಮಾಡಲಾಗಿದೆ. ಕೆಲವರನ್ನು ಹೋಂ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.