ಒಟ್ಟಿನಲ್ಲಿ ನಿರಾಶಾದಾಯಕ ಬಜೆಟ್ ಆಗಿದೆ: ಸಿಎಂ ಸಿದ್ದರಾಮಯ್ಯ

ಸೋಮವಾರ, 29 ಫೆಬ್ರವರಿ 2016 (16:30 IST)
ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಮಂಡಿಸಿದ ಸಾಮಾನ್ಯ ಬಜೆಟ್ ರೈತರ ಪರವಲ್ಲ. ಇದೊಂದು ನಿರಾಶಾದಾಯಕ ಬಜೆಟ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಕೇಂದ್ರ ಸಚಿವ ಜೇಟ್ಲಿ ತ್ವರಿತ ನೀರಾವರಿಗೆ ಹೆಚ್ಚಿನ ಹಣ ಕೊಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಭರವಸೆ ಹುಸಿಯಾಗಿದ್ದು ಕೇವಲ 1775 ಕೋಟಿ ರೂಪಾಯಿಗಳನ್ನು ಮೀಸಲಾಗಿರಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ರಾಜ್ಯ ಸರಕಾರ ಜಾರಿ ಮಾಡಿದ್ದ ಯೋಜನೆಯನ್ನು ದೇಶಾದ್ಯಂತ ಜಾರಿಗೊಳಿಸುವುದಾಗಿ ಹೇಳಿಕೆ ನೀಡಿದ್ದರು. ಉದ್ಯೋಗ ಖಾತ್ರಿ ಯೋಜನೆಗೆ 4500 ಕೋಟಿ ರೂ. ನೀಡಲಾಗಿದೆ. ಮತ್ತಷ್ಟು ಹೆಚ್ಚಿಸಬಹುದಿತ್ತು ಎಂದು ಅಭಿಪ್ರಾಯಪಟ್ಟರು.
 
2021ರ ವೇಳೆಗೆ ರೈತರ ಆದಾಯ ದುಪ್ಪಟ್ಟು ಮಾಡುತ್ತೇನೆ ಎಂದು ಪ್ರಧಾನಿ ಮೋದಿ ನೀಡಿದ ಹೇಳಿಕೆ ಬಗ್ಗೆ ಬಜೆಟ್‌ನಲ್ಲಿ ಯಾವುದೇ ಉಲ್ಲೇಖವಿಲ್ಲ. ಮನ್ ಕಿ ಬಾತ್‌ನಲ್ಲಿ ರೈತರ ಪರ ಕಾಳಜಿ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಅದೇ ಕಾಳಜಿಯನ್ನು ಬಜೆಟ್‌ನಲ್ಲಿ ರೈತರ ಪರವಾಗಿ ತೋರಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಸೆ ವ್ಯಕ್ತಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ