ಆರೋಗ್ಯ ವಿಚಾರ ರಾಜ್ಯ ಸರ್ಕಾರದ ಅಧೀನದಲ್ಲಿ ಬರುತ್ತದೆ. ಯಾವುದೇ ರಾಜ್ಯ ಸರ್ಕಾರ, ಕೇಂದ್ರಾಡಳಿತ ಪ್ರದೇಶ ಆಕ್ಸಿಜನ್ ಕೊರತೆಯಿಂದ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರಕ್ಕೆ ವರದಿ ಸಲ್ಲಿಸಿಲ್ಲ. ಆದರೆ ಕೆಲ ಸರ್ಕಾರಗಳು ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯನ್ನು ಮರು ತಿದ್ದುಪಡಿ ಮಾಡಿ ಕಳುಹಿಸಿದ್ದಾರೆ ಎಂದು ಸಚಿವೆ ಮಾಹಿತಿ ನೀಡಿದರು.
ಆಕ್ಸಿಜನ್ ಕೊರತೆ, ಪೂರೈಕೆಯು ಆಸ್ಪತ್ರೆ ಹಾಗೂ ಆಕ್ಸಿಜನ್ ಪೂರೈಕೆದಾರರ ನಡುವಿನ ವಿಚಾರ. ಇದರಲ್ಲಿ ಸರ್ಕಾರದ ಪಾತ್ರ ಇರುವುದಿಲ್ಲ. ಆದರೂ ಕೊರೊನಾ 2ನೇ ಅಲೆ ವೇಳೆ ದೇಶಾದ್ಯಂತ ಹಿಂದೆಂದಿಗಿಂತಲೂ ಹೆಚ್ಚಿನ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆಕ್ಸಿಜನ್ ವಿತರಣೆಗೆ ಮುಂದಾಗಿತ್ತು ಎಂದಿದ್ದಾರೆ.