Pahalgam Terror Attack:ಮೃತ ಕನ್ನಡಿಗರ ಕುಟುಂಬಕ್ಕೆ ₹10 ಲಕ್ಷ ಪರಿಹಾರ

Sampriya

ಬುಧವಾರ, 23 ಏಪ್ರಿಲ್ 2025 (20:22 IST)
Photo Credit X
ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ ರಾಜ್ಯದ ಪ್ರತಿ ನಾಗರಿಕರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಮೂವರು ಕನ್ನಡಿಗರು ಸೇರಿದಂತೆ 28 ಮಂದಿ ಸಾವನ್ನಪ್ಪಿದ್ದಾರೆ. ಈ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 10 ಲಕ್ಷ ಪರಿಹಾರ ನೀಡಲಾಗುವುದು ಎಂದರು.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ ರಾಜ್ಯದ ಪ್ರತಿ ನಾಗರಿಕರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ಪರಿಹಾರ ನೀಡಲಾಗುವುದು ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದಕ್ಕು ಮುನ್ನ ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ದಾಳಿ ಸಂಪೂರ್ಣ ಯೋಜಿತವಾಗಿದ್ದು, 28 ಜನರನ್ನು ಬಲಿ ಪಡೆದ ಉಗ್ರರ ಹೇಯಕೃತ್ಯವನ್ನು ಖಂಡಿಸುತ್ತೇನೆ ಎಂದು ಸಿಎಂ ಹೇಳಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ