ಚಿತ್ರಕಲೆ ಭಾವನೆ ವ್ಯಕ್ತಪಡಿಸುವ ಒಂದು ಮಾಧ್ಯಮ : ಬೊಮ್ಮಾಯಿ
20ನೇ ಚಿತ್ರಸಂತೆ ಉದ್ಘಾಟನೆ ಮಾಡಿದ ಸಿಎಂ ಬೊಮ್ಮಾಯಿ, ಆಯೋಜಕರಿಗೆ 2 ದಿನ ಸಂತೆ ಆಯೋಜನೆಗೆ ಸೂಚನೆ ಕೊಟ್ಟಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಿತ್ರಕಲೆ ಮನಸ್ಸಿನ ಭಾವನೆಗಳನ್ನು ವ್ಯಕ್ತಪಡಿಸುವ ಒಂದು ಮಾಧ್ಯಮ.
ಮನದಾಳದ ಮಾತುಗಳು ಮತ್ತು ಭಾವನೆಗಳನ್ನು ಚಿತ್ರಕಲೆ ಮೂಲಕ ವ್ಯಕ್ತಪಡಿಸಲಾಗುತ್ತದೆ. ಚಿತ್ರಕಲೆ ತಿಳಿದುಕೊಳ್ಳುವ ಪ್ರಯತ್ನ ಸಾರ್ವಜನಿಕರು ಮಾಡಬೇಕು. ಚಿತ್ರಕಲಾ ಪರಿಷತ್ತು ಕೆಲಸ ಒಳ್ಳೆಯ ಕಲಾವಿದರಿಗೆ ಅವಕಾಶ ಮಾಡಿಕೊಡಬೇಕು ಹಾಗೂ ಸಾಮಾನ್ಯ ಜನರಲ್ಲಿ ಚಿತ್ರಕಲೆ ಅಭಿಪ್ರಾಯ ಮೂಡಿಸಬೇಕು ಎಂದು ಸಲಹೆ ನೀಡಿದರು.