ಪ್ರಧಾನಿ, ಭಾರತದ ರಾಯಭಾರಿ ಕಚೇರಿಗೆ ಧನ್ಯವಾದ ತಿಳಿಸಿದ ಪಾಕ್ ಯುವತಿ

ಬುಧವಾರ, 9 ಮಾರ್ಚ್ 2022 (20:28 IST)
ಉಕ್ರೇನ್‍ನಲ್ಲಿ ಸಿಲುಕಿದ್ದ ಪಾಕಿಸ್ತಾನದ ಯುವತಿಯೊಬ್ಬಳು ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತೀಯ ರಾಯಭಾರಿ ಕಚೇರಿಗೆ ಧನ್ಯವಾದವನ್ನು ತಿಳಿಸಿದ್ದಾರೆ.
ಪಾಕಿಸ್ತಾನಿ ಯುವತಿ ಅಸ್ಮಾ ಶಫೀಕ್ ಅವರನ್ನು ಉಕ್ರೇನ್‍ನ ಕೀವ್‍ನಿಂದ ಸುರಕ್ಷಿತವಾಗಿ ಬೇರೆ ಸ್ಥಳಕ್ಕೆ ರಕ್ಷಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ವೀಡಿಯೋವೊಂದನ್ನು ಮಾಡಿ ಧನ್ಯವಾದವನ್ನು ತಿಳಿಸಿದರು.
ವೀಡಿಯೋದಲ್ಲಿ ಅವರು, ಉಕ್ರೇನ್‍ನಲ್ಲಿ ಬಹಳ ಕಷ್ಟಕರ ಪರಿಸ್ಥಿತಿಯಲ್ಲಿ ಸಿಲುಕಿದ್ದೆ. ನಾವು ಅತ್ಯಂತ ಕಷ್ಟಕರ ಪರಿಸ್ಥಿತಿಯಲ್ಲಿ ಸಿಲುಕಿರುವಾಗ ಕೀವ್‍ನಲ್ಲಿ ಭಾರತೀಯ ರಾಯಭಾರಿ ಕಚೇರಿಯವರು ಎಲ್ಲಾ ರೀತಿಯ ಬೆಂಬಲ ನೀಡಿದ್ದಾರೆ. ನಮಗೆ ಕೀವ್‍ನಿಂದ ಪಾರಾಗಲು ಸಹಾಯ ಮಾಡಿದ ಭಾರತೀಯ ರಾಯಭಾರ ಕಚೇರಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದವನ್ನು ತಿಳಿಸುತ್ತೇನೆ. ನಾವು ಸುರಕ್ಷಿತವಾಗಿ ಮನೆಗೆ ತಲುಪುತ್ತೇವೆ ಎಂದು ಭಾವಿಸುತ್ತೇವೆ ಎಂದು ಈ ವೀಡಿಯೋದಲ್ಲಿ ತಿಳಿಸಿದರು.
ವೀಡಿಯೋದಲ್ಲಿ ಅವರು, ಉಕ್ರೇನ್‍ನಲ್ಲಿ ಬಹಳ ಕಷ್ಟಕರ ಪರಿಸ್ಥಿತಿಯಲ್ಲಿ ಸಿಲುಕಿದ್ದೆ. ನಾವು ಅತ್ಯಂತ ಕಷ್ಟಕರ ಪರಿಸ್ಥಿತಿಯಲ್ಲಿ ಸಿಲುಕಿರುವಾಗ ಕೀವ್‍ನಲ್ಲಿ ಭಾರತೀಯ ರಾಯಭಾರಿ ಕಚೇರಿಯವರು ಎಲ್ಲಾ ರೀತಿಯ ಬೆಂಬಲ ನೀಡಿದ್ದಾರೆ. ನಮಗೆ ಕೀವ್‍ನಿಂದ ಪಾರಾಗಲು ಸಹಾಯ ಮಾಡಿದ ಭಾರತೀಯ ರಾಯಭಾರ ಕಚೇರಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದವನ್ನು ತಿಳಿಸುತ್ತೇನೆ. ನಾವು ಸುರಕ್ಷಿತವಾಗಿ ಮನೆಗೆ ತಲುಪುತ್ತೇವೆ ಎಂದು ಭಾವಿಸುತ್ತೇವೆ ಎಂದು ಈ ವೀಡಿಯೋದಲ್ಲಿ ತಿಳಿಸಿದರುಅಸ್ಮಾ ಶಫೀಕ್ ಅವರು ಈಗ ಪಶ್ಚಿಮ ಉಕ್ರೇನ್‍ಗೆ ಹೋಗುತ್ತಿದ್ದಾರೆ. ಅಲ್ಲಿಂದ ಶೀಘ್ರದಲ್ಲೇ ಅವರು ತಮ್ಮ ಕುಟುಂಬದವರನ್ನು ಮತ್ತೆ ಸೇರಿಕೊಳ್ಳುತ್ತಾರೆ ಎಂದು ಮೂಲಗಳು ತಿಳಿಸಿವೆ. ಉಕ್ರೇನ್-ರಷ್ಯಾ ನಡುವಿನ ಯುದ್ಧ 14ನೇ ದಿನ ಪೂರೈಸಿದೆ. ರಷ್ಯಾ ಪಡೆಗಳು ಮಾರಣಹೋಮವನ್ನೇ ಸೃಷ್ಟಿಸ್ತಿವೆ. ಯುದ್ಧದ ನಿಯಮಗಳನ್ನು ಉಲ್ಲಂಘಿಸಿ ಜನವಸತಿ ಪ್ರದೇಶಗಳ ಮೇಲೆ ಬಾಂಬ್‍ಗಳ ಸುರಿಮಳೆಗೈಯ್ಯುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ