ಸಿಎಂ ಸ್ಥಾನ ಸಿಗದಿದ್ದಕ್ಕೆ ಪರಮೇಶ್ವರ್ ಹುಚ್ಚುಚ್ಚಾಗಿ ಮಾತಾಡ್ತಿದ್ದಾರೆ: ಪ್ರತಾಪ್ ಸಿಂಹ್

ಗುರುವಾರ, 29 ಡಿಸೆಂಬರ್ 2016 (09:47 IST)
ನೋಟ್ ಬ್ಯಾನ್ ಆದ 50 ದಿನಗಳಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ನನ್ನನ್ನು ಸುಟ್ಟು ಬಿಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲೂ ಹೇಳಿಲ್ಲ. ಆದರೆ, ಮುಖ್ಯಮಂತ್ರಿ ಆಗಬೇಕು ಎಂದು ಬಹಳಷ್ಟು ಕನಸು ಕಂಡಿದ್ದ ಗೃಹ ಸಚಿವ ಜಿ.ಪರಮೇಶ್ವರ್ ಆ ಸ್ಥಾನ ಸಿಗದಿದ್ದರಿಂದ ಭ್ರಮನಿರಸಗೊಂಡು ಹುಚ್ಚುಚ್ಚಾಗಿ ಮಾತನಾಡುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ್ ಟಾಂಗ್ ನೀಡಿದ್ದಾರೆ. 
 
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟರನ್ನು ಮಟ್ಟ ಹಾಕುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ನೋಟ್ ಬ್ಯಾನ್ ನಿರ್ಧಾರ ಕೈಗೊಂಡಿದ್ದಾರೆ. 50 ದಿನಗಳ ಅವಕಾಶ ನೀಡಿ ಎಂದು ಪ್ರಧಾನಿ ಅವರು ಮನವಿ ಮಾಡಿದ್ದರು. ನೋಟ್ ಬ್ಯಾನ್ ಸಂದರ್ಭದಲ್ಲಿ ಆಗಿದ್ದ ಸಮಸ್ಯೆಗಳು ಈಗ ಇಲ್ಲ. ಸಮಸ್ಯೆ ಬಗೆಹರಿಯುತ್ತಿದೆ ಎಂದು ಸಮರ್ಥಿಸಿಕೊಂಡರು.   
 
ಮುಖ್ಯಮಂತ್ರಿ ಆಗಬೇಕು ಎಂದು ಪರಮೇಶ್ವರ್ ಅವರು ಕನಸು ಕಂಡಿದ್ದರು. ಸಿಎಂ ಆಗುವ ಕನಸು ಕನಸಾಗಿಯೇ ಉಳಿದಿದ್ದರಿಂದ ಅವರು ಹುಚ್ಚುಚ್ಚುಗಿ ಪ್ರಧಾನಿ ಮೋದಿ ಅವರ ಕುರಿತು ಹೇಳಿಕೆ ನೀಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು. 
 
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನವನ್ನು ಪರಮೇಶ್ವರ್ ಅವರಿಗೆ ಬಿಟ್ಟುಕೊಡುವ ಮೂಲಕ ಅವರನ್ನು ಮಾನಸಿಕ ಸ್ವಾಸ್ಥ್ಯರನ್ನಾಗಿ ಮಾಡಬೇಕು ಎಂದು ಸಂಸದ ಪ್ರತಾಪ್ ಸಿಂಹ್ ವ್ಯಂಗ್ಯವಾಡಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ