ಗೃಹ ಸಚಿವ ಸ್ಥಾನಕ್ಕೆ ಜಿ.ಪರಮೇಶ್ವರ್ ರಾಜೀನಾಮೆ ನೀಡಲಿ: ಮುನಿಯಪ್ಪ

ಶನಿವಾರ, 6 ಮೇ 2017 (16:50 IST)
ಗೃಹ ಸಚಿವ ಸ್ಥಾನಕ್ಕೆ ಜಿ.ಪರಮೇಶ್ವರ್ ರಾಜೀನಾಮೆ ನೀಡಲಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಚ್. ಮುನಿಯಪ್ಪ ಒತ್ತಾಯಿಸಿದ್ದಾರೆ.
 
ಪರಮೇಶ್ವರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಮತ್ತು ಗೃಹ ಸಚಿವ ಖಾತೆಯನ್ನು ಹೊಂದಿರುವುದರಿಂದ ನಿಭಾಯಿಸಲು ಕಷ್ಟವಾಗುತ್ತಿದೆ. ಆದ್ದರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೂಕ್ತ ಎಂದರು. 
 
ರಾಜ್ಯದಲ್ಲಿ ಪಕ್ಷದ ಸಂಘಟನೆ ಸ್ಥಗಿತವಾಗಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲು ಬಯಸುವವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಹೇಳಿದ್ದಾರೆ.
 
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಲ್ಲಿ ಒಬ್ಬರಾಗಿರುವ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಮುನಿಯಪ್ಪ, ಹೈಕಮಾಂಡ್ ಯಾವ ಹೊಣೆ ನೀಡಿದರೂ ನಿಭಾಯಿಸುತ್ತೇನೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ