ಪರಪ್ಪನ ಅಗ್ರಹಾರ ಗೋಲ್‌ಮಾಲ್‌ನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ: ಶೆಟ್ಟರ್

ಬುಧವಾರ, 19 ಜುಲೈ 2017 (19:43 IST)
ಪರಪ್ಪನ ಅಗ್ರಹಾರ ಗೋಲ್‌ಮಾಲ್‌ನ್ನು ಸರಕಾರ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ವಿಧಾನಸಭೆಯ  ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಒತ್ತಾಯಿಸಿದ್ದಾರೆ.
 
ತಮಿಳುನಾಡಿನ ಎಐಎಡಿಎಂಕೆ ನಾಯಕಿ ಶಶಿಕಲಾ ಮತ್ತು ಛಾಪಾ ಕಾಗದ ಹಗರಣ ರೂವಾರಿ ಕರೀಂಲಾಲ್ ತೆಲಗಿ ಕೋಟಿ ಕೋಟಿ ಹಣ ನೀಡಿ ವಿಐಪಿ ಆತಿಥ್ಯ ಪಡೆಯುತ್ತಿದ್ದಾರೆ ಎನ್ನುವ ಬಗ್ಗೆ ಕೆಲದಿನಗಳ ಹಿಂದೆ ಕಾರಾಗೃಹ ಡಿಐಜಿಯಾಗಿದ್ದ ರೂಪಾ ಸರಕಾರಕ್ಕೆ ವರದಿ ಸಲ್ಲಿಸಿದ್ದರು. 
 
ಪರಪ್ಪನ ಜೈಲಿನ ಅವ್ಯವಹಾರಗಳ ಬಗ್ಗೆ ವರದಿ ನೀಡುವಂತೆ ಸಿಎಂ ಸಿದ್ದರಾಮಯ್ಯ ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ನೇತೃತ್ವದಲ್ಲಿ ಸಮಿತಿ ರಚಿಸಿದ್ದರು. ವಾರದೊಳಗೆ ಪ್ರಾಥಮಿಕ ವರದಿ ಸಲ್ಲಿಸುವಂತೆ ಆದೇಶಿಸಲಾಗಿದೆ.
 
ಆದರೆ, ನ್ಯಾಯಾಂಗ ತನಿಖೆಯಿಂದ ಮಾತ್ರ ಪರಪ್ಪನ ಅಗ್ರಹಾರ ಜೈಲಿನ ಅವ್ಯವಹಾರ ಬಹಿರಂಗಗೊಳಿಸಲು ಸಾಧ್ಯ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸರಕಾರಕ್ಕೆ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ