ಪೋಷಕರ ತರಾಟೆಗೆ ಮಣಿದ ಸರ್ಕಾರ: ಶಾಲೆ ಆರಂಭ ಮುಂದೂಡಿಕೆ

ಗುರುವಾರ, 4 ಜೂನ್ 2020 (09:02 IST)
ಬೆಂಗಳೂರು: ರಾಜ್ಯ ಸರ್ಕಾರ ಕೊರೋನಾ ನಡುವೆಯೂ ಜುಲೈನಲ್ಲಿ ಶಾಲೆ ಆರಂಭಿಸಲು ತೀರ್ಮಾನಿಸುವುದರ ಬಗ್ಗೆ ಪೋಷಕರು ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಸಚಿವ ಸುರೇಶ್ ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಶಾಲೆ ಆರಂಭ ಸದ್ಯಕ್ಕಿಲ್ಲ ಎಂಬ ತೀರ್ಮಾನಕ್ಕೆ ಸಚಿವರು ಬಂದಿದ್ದಾರೆ.


ಶಿಕ್ಷಣ ಸಚಿವರಿಗೆ ಫೇಸ್ ಬುಕ್ ಮುಖಾಂತರ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಮಕ್ಕಳ ಜೀವದ ಜತೆ ಪ್ರಯೋಗ ನಡೆಸುತ್ತಿರುವುದೇಕೆ ಎಂದು ಹಲವರು ಪ್ರಶ್ನಿಸಿದ್ದರು. ಕೆಲವರಂತೂ ಸಾಮಾಜಿಕ ಜಾಲತಾಣದಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲ್ಲ ಎಂದು ಅಭಿಯಾನವನ್ನೇ ಆರಂಭಿಸಿದ್ದರು.

ಈ ರೀತಿ ಪೋಷಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೇ ಜುಲೈ 1 ರಿಂದ ಶಾಲೆ ಆರಂಭಿಸುವ ನಿರ್ಧಾರದಿಂದ ಹಿಂದೆ ಸರಿಯಲಾಗಿದೆ. ಈ ಬಗ್ಗೆ ಶಿಕ್ಷಣ ಸಚಿವರು ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲೂ ಸ್ಪಷ್ಟನೆ ನೀಡಿದ್ದು, ಸದ್ಯಕ್ಕೆ ಶಾಲೆ ಆರಂಭ ಮಾಡಲ್ಲ ಎಂದು ಭರವಸೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ