ಪರಮೇಶ್ವರ್ ಅವರ 100 ಕ್ಷೇತ್ರಗಳ ಯಾತ್ರೆ ಇಂದಿನಿಂದ ಪ್ರಾರಂಭ
ಗುರುವಾರ, 21 ಡಿಸೆಂಬರ್ 2017 (07:26 IST)
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ 100 ಕ್ಷೇತ್ರಗಳ ಯಾತ್ರೆ ಇಂದು ಆರಂಭವಾಗಲಿದೆ. ಸಿ.ಎಂ.ಸಿದ್ಧರಾಮಯ್ಯ ಅವರು ಕೈಗೊಂಡಿರುವ ಈ “ಸಾಧನಾ ಸಂಭ್ರಮ” ಯಾತ್ರೆ ಕೋಲಾರ ಜಿಲ್ಲೆ ಮುಳಬಾಗಿಲಿನ ಕುರುಡುಮಲೆ ಗಣೇಶ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಪ್ರಾರಂಭವಾಗಲಿದೆ.
ಡಿ.21 ಹಾಗು 22 ರಂದು ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಬರುವ ಮುಳಬಾಗಿಲು, ಕೆಜಿಎಫ್, ಕೋಲಾರ ಹಾಗೂ ಮಾಲೂರು ವಿಧಾನ ಸಭೆ ಕ್ಷೇತ್ರಗಳಲ್ಲಿ ನಡೆಯಲಿದೆ. ನಂತರ ಡಿ 29 ಹಾಗೂ 30 ರಂದು ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಬರುವ ಕ್ಷೇತ್ರಗಳಲ್ಲಿ ಯಾತ್ರೆ ಆಯೋಜಿಸಲಾಗಿದೆ. ಅನಂತರ ಜನವರಿ 4 ಮತ್ತು 5 ರಂದು ಬೆಂಗಳೂರು ಗ್ರಾಮಾಂತರ ಹಾಗೂ ತುಮಕೂರು ಲೋಕಸಭಾ ವ್ಯಾಪ್ತಿಯ ವಿಧಾನಸಭೆ ಕ್ಷೇತ್ರಗಳಲ್ಲಿ ಸಂಚರಿಸಲಿದೆ.
ಪ್ರತಿ ಕ್ಷೇತ್ರದಲ್ಲೂ ಸಮಾವೇಶ ಆಯೋಜಿಸಿ ಸರ್ಕಾರದ ಕಾರ್ಯಕ್ರಮಗಳು ಹಾಗೂ ಪ್ರತಿಪಕ್ಷಗಳು ಮಾಡಿರುವ ಆರೋಪಗಳಿಗೆ ತಿರುಗೇಟು ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. ಹಾಗೆ ಈ ಯಾತ್ರೆಯಲ್ಲಿ ಪಕ್ಷದ ಎಲ್ಲಾ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಕೂಡ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ