ಹೋಮ್ ಕ್ವಾರೆಂಟೈನ್ ನಿಯಮ ಉಲ್ಲಂಘಿಸಿದರೆ ಪಾಸ್ ಪೋರ್ಟ್ ಮುಟ್ಟುಗೋಲು- ಉಡುಪಿ ಡಿಸಿ ಎಚ್ಚರಿಕೆ

ಶನಿವಾರ, 28 ಮಾರ್ಚ್ 2020 (10:38 IST)
ಉಡುಪಿ : ವಿದೇಶದಿಂದ ಬಂದವರು ಹೋಮ್ ಕ್ವಾರೆಂಟೈನ್ ನಿಯಮವನ್ನು ಉಲ್ಲಂಘಿಸಿದರೆ ಅವರ  ಪಾಸ್ ಪೋರ್ಟ್ ಮುಟ್ಟುಗೋಲು ಹಾಕುವುದಾಗಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ಕೊರೊನಾ ಹರಡದಂತೆ ಕೇಂದ್ರ ಸರ್ಕಾರ ಏ.14ರವರೆಗೆ ಲಾಕ್ ಡೌನ್ ಘೋಷಿಸಿದ್ದಾರೆ. ಈ ಆದೇಶ ಉಲ್ಲಂಘಿಸಿ ಶಂಕಿತರು ಸುತ್ತಾಡುವ ಮಾಹಿತಿ ಸಿಕ್ಕಿದೆ. ಅಂತವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು. ಅಲ್ಲದೇ ಅವರ ಪಾಸ್ ಪೋರ್ಟ್ ಮುಟ್ಟುಗೋಲು ಹಾಕಿ ಮುಂದೆ ವಿದೇಶ ಪ್ರಯಾಣ ಮಾಡದಂತೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ  ಎಂದು ಎಚ್ಚರಿಕೆ ಕೊಟ್ಟಿದ್ದಾರೆ .

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ