ಗಣಪತಿ ಆತ್ಮಹತ್ಯೆ ಪ್ರಕರಣ: ಪ್ರಧಾನಿ ಮೋದಿಗೆ ಪತ್ರ ಬರೆದ ಪಾವನಾ

ಬುಧವಾರ, 13 ಜುಲೈ 2016 (18:58 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನನಗೆ ಸಿಐಡಿ ಮತ್ತು ನ್ಯಾಯಾಂಗ ತನಿಖೆಯ ಮೇಲೆ ನಂಬಿಕೆ ಇಲ್ಲ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯುತ್ತಿದ್ದೇನೆ ಎಂದು ಗಣಪತಿ ಪತ್ನಿ ಪಾವನಾ ತಿಳಿಸಿದ್ದಾರೆ.
 
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿವೈಎಸ್‌ಪಿ ಗಣಪತಿ ಪತ್ನಿ ಪಾವನಾ, ನನ್ನ ಪತಿಯ ಆತ್ಮಹತ್ಯೆ ಪ್ರಕರಣ ಕುರಿತಂತೆ ಸರಕಾರ ನನ್ನಿಂದ ಯಾವುದೇ ಹೇಳಿಕೆಯನ್ನು ಪಡೆದುಕೊಂಡಿಲ್ಲ. ನನ್ನ ಎದುರು ಮಹಜರು ಸಹ ಮಾಡಿಸಿಲ್ಲ. ಒಟ್ಟಾರೆ ರಾಜ್ಯ ಸರಕಾರ ಪ್ರಕರಣದ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಮಾಜಿ ಗೃಹ ಸಚಿವ ಜಾರ್ಜ್ ಅವರನ್ನು ರಕ್ಷಿಸುವ ಉದ್ದೇಶದಿಂದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
 
ಪ್ರಕರಣದ ದಾರಿ ತಪ್ಪಿಸಲು ನ್ಯಾಯಾಂಗ ತನಿಖೆ ಮುಂದುವರೆದರೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುತ್ತೇನೆ ಎಂದು ಡಿವೈಎಸ್‌ಪಿ ಗಣಪತಿ ಪತ್ನಿ ಪಾವನಾ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ