ಸಂತೆಗೆ ಮುಗಿಬಿದ್ದ ಜನತೆ: ಪೊಲೀಸರಿಂದ ಲಘು ಲಾಠಿ ಚಾರ್ಜ್

ಶನಿವಾರ, 11 ಏಪ್ರಿಲ್ 2020 (21:08 IST)
ಸಂತೆಯಲ್ಲಿ ಸಾಮಗ್ರಿ ಕೊಳ್ಳೋಕೆ ಮುಗಿಬಿದ್ದೋರಿಗೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಗ್ರಾಮೀಣ ಭಾಗದ ಅಂಗಡಿಗಳಲ್ಲಿ ತರಕಾರಿ ಸಾಮಾಗ್ರಿಗಳಿಗೆ ಕೊರತೆಯಾಗಬಾರದೆಂಬ ದಿಸೆಯಲ್ಲಿ ಉಡುಪಿಯ ಕುಂದಾಪುರದ ಶನಿವಾರದ ಸಂತೆಯಲ್ಲಿ ಕೇವಲ ಅಂಗಡಿ ವ್ಯಾಪಾರಸ್ಥರಿಗೆ ಖರೀದಿಸಲು ಮಾತ್ರ ಅವಕಾಶ ಕಲ್ಪಿಸಲಾಗಿತ್ತು.

ಉಳಿದಂತೆ ಸಾರ್ವಜನಿಕರಿಗೆ ಪ್ರವೇಶಾನುಮತಿ ನಿರಾಕರಿಸಲಾಗಿತ್ತು. ಆದ್ರೆ ಸಂತೆಯಲ್ಲಿ ಸಾರ್ವಜನಿಕರು ಸಾಮಗ್ರಿಗಳನ್ನ ಖರೀದಿಸಲು ಮುಗಿಬಿದ್ದ ದೃಶ್ಯ ಕಂಡು ಬಂದಿದ್ದು, ಪರಿಣಾಮ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದರು.
ಲಾಕ್‍ಡೌನ್ ಹಿನ್ನೆಲೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕೇವಲ ಹೋಲ್ ಸೇಲ್ ಮಾರಾಟಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಎಪಿಎಂಸಿ ಆವರಣದ ಮೂರು ಗೇಟ್‍ಗಳನ್ನ ಬಂದ್ ಮಾಡಲಾಗಿತ್ತು. ಅಂಗಡಿ ವ್ಯಾಪಾರಸ್ಥರಿಗೆ ಮಾತ್ರ ಖರೀದಿಸಲು ಅವಕಾಶ ಕಲ್ಪಿಸಲಾಗಿತ್ತು.

ಪೊಲೀಸ್ ಬಂದೋಬಸ್ತ್ ನಡುವೆಯೂ ಎಪಿಎಂಸಿ ಆವರಣ ಗೋಡೆಯಿಂದ ಜಿಗಿದು ಸಾರ್ವಜನಿಕರು ಖರೀದಿಗೆ ಮುಂದಾದರು. ಈ ವೇಳೆ ಕುಂದಾಪುರ ನಗರ ಠಾಣಾಧಿಕಾರಿ ಹರೀಶ್ ಆರ್ ನಾಯ್ಕ್ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರೂ ಸಾರ್ವಜನಿಕರು ಖರೀದಿಗೆ ಮುಂದಾದರು.

ಈ ವೇಳೆ ಪೊಲೀಸರು ಗುಂಪು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು. ಬಳಿಕ ಕುಂದಾಪುರ ಸಹಾಯಕ ಆಯುಕ್ತ ರಾಜು ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಂಗಡಿ ಮಾಲೀಕರಿಗೆ ಹಾಗೂ ಸಾರ್ವಜನಿಕರಿಗೆ ಸ್ಪಷ್ಟ ಸೂಚನೆ ನೀಡಿ ವಾಪಾಸ್ಸಾದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ