ಪಾದಚಾರಿಗಳು ರಸ್ತೆ ದಾಟಲು ಹರಸಾಹಸ
ನಗರದ ಬಹುದೊಡ್ಡ ಸಮಸ್ಯೆ ಎಂದರೆ ಸಂಚಾರ ದಟ್ಟಣೆ .ಅದರಲ್ಲೂ ಪಾದಚಾರಿಗಳು ರಸ್ತೆ ದಾಟಲು ಹರಸಾಹಸ ಪಟ್ಟು ಸಂಚಾರ ದಟ್ಟಣೆ ಕಡಿಮೆ ಆಗುವುದನ್ನು ಕಾದು ಕುಳಿತು ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವಂತಾಗಿದೆ. ಸಂಚಾರ ದಟ್ಟಣೆ ಹೆಚ್ಚಾಗಿ ಇರುವುದರಿಂದ ಪಾದಚಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುವ 100 ಕ್ಕೂ ಹೆಚ್ಚು ಕಡೆ ಬಿಬಿಎಂಪಿ ಪಾದಚಾರಿ ಮೇಲ್ಸೇತುವೆ ನಿರ್ಮಿಸಿದೆ, ಅದರಲ್ಲಿ ಬರುತೇಕ ಪಾದಚಾರಿ ಮೇಲ್ಸೇತುವೆಗಳು ನಿರುಪಯೋಗವಾಗಿದೆ ಇಲ್ಲವೆ ಬಸ್ ನಿಲ್ಧಾಣಕ್ಕೆ ದೂರ ಇವೆ. ಹಾಗಾಗಿ ಅಷ್ಟುದೂರ ಯಾರು ಹೊಗುತ್ತಾರೆ ಎಂದು ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುತ್ತಿದ್ದಾರೆ. ಇನ್ನು ಕೆಲವರು ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ.