ಹಾಸನ: ಲೈಂಗಿಕ ದೌರ್ಜನ್ಯ ಹಾಗೂ ಪೆನ್‌ಡ್ರೈವ್‌ನಲ್ಲಿರುವ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಎಸ್‌ಐಟಿ ವಶದಲ್ಲಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಇಂದು ಸಂಸದರ ನಿವಾಸದಲ್ಲಿ ನಾಲ್ಕು ಗಂಟೆಗಳ ಕಾಲ ಸ್ಥಳ ಮಹಜರು ಮಾಡಿದರು.
ಇದರ ಬೆನ್ನಲ್ಲೇ ಇದೀಗ ಇನ್ನೊಂದು ಆಯಾಮದಲ್ಲೂ ತನಿಖೆಯನ್ನು ಎಸ್‌ಐಟಿ ತಂಡ ಚುರುಕುಮಾಡಿದೆ. ಪೆನ್‌ಡ್ರೈವ್ ಹಂಚಿಕೆ ಮಾಡಿದವರ ಬೆನ್ನು ಹತ್ತಿರುವ ಎಸ್‌ಐಟಿ ಅಧಿಕಾರಿಗಳು ಪ್ರಕರಣದ ತನಿಖೆ ತೀವ್ರಗೊಳಿಸಿದ್ದಾರೆ. ಈ ಸಂಬಂಧ ಇದೀಗ ಪ್ರಜ್ವಲ್‌ಗೆ ಆಪ್ತರಾಗಿರುವ ಜೆಡಿಎಸ್ ಮುಖಂಡರನ್ನೂ ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.
ಕೆಲ ದಿನಗಳಿಂದ ಜಿಲ್ಲೆಯಲ್ಲಿರುವ ಅಧಿಕಾರಿಗಳ ತಂಡ 10ಕ್ಕೂ ಅಧಿಕ ಜನರ ಮನೆಗಳ ಮೇಲೆ ದಾಳಿ ನಡೆಸಿದೆ. ಅದಲ್ಲದೆ ನಾಯಕರಿಂದ ಮೊಬೈಲ್ ಅನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.