ಪಿಂಚಣಿದಾರರು ಈ ಕೆಲಸ ಮಾಡಲೇಬೇಕು

ಸೋಮವಾರ, 21 ಸೆಪ್ಟಂಬರ್ 2020 (19:44 IST)
ಪಿಂಚಣಿಯನ್ನು ಪಡೆಯುತ್ತಿರುವ ರಾಜ್ಯ ಸರ್ಕಾರದ ಪಿಂಚಣಿದಾರರು ಹಾಗೂ ಕುಟುಂಬ ಪಿಂಚಣಿದಾರರಿಗೆ ಖಜಾನೆ ಅಧಿಕಾರಿ ಖಡಕ್ ಸೂಚನೆ ಕೊಟ್ಟಿದ್ದಾರೆ.

ಕರ್ನಾಟಕ ರಾಜ್ಯಾದ್ಯಂತ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಪಿಂಚಣಿಯನ್ನು ಪಡೆಯುತ್ತಿರುವ ರಾಜ್ಯ ಸರ್ಕಾರದ ಪಿಂಚಣಿದಾರರು ಹಾಗೂ ಕುಟುಂಬ ಪಿಂಚಣಿದಾರರು ರಾಷ್ಟ್ರೀಕೃತ ಬ್ಯಾಂಕ್‍ಗಳಿಗೆ ವರ್ಗಾಯಿಸಿಕೊಳ್ಳುವಂತೆ ವಿಜಯಪುರ ಜಿಲ್ಲಾ ಖಜಾನೆಯ ಉಪನಿರ್ದೇಶಕ ಸಿದ್ದಲಿಂಗ ಕೆ.ವಿ  ತಿಳಿಸಿದ್ದಾರೆ.

ರಾಷ್ಟ್ರೀಕೃತ ಬ್ಯಾಂಕ್‍ಗಳಾದ ಕೆನರಾ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್, ವಿಜಯಬ್ಯಾಂಕ್,
ದೇನಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಯುನಿಯನ್ ಬ್ಯಾಂಕ್, ಆಂದ್ರಾ ಬ್ಯಾಂಕ್ ಈ ಬ್ಯಾಂಕ್‍ಗಳನ್ನು ಹೊರತುಪಡಿಸಿ  ಉಳಿದ ಬ್ಯಾಂಕ್‍ಗಳಲ್ಲಿ ಪಿಂಚಣಿ ಪಡೆಯುತ್ತಿರುವ ಪಿಂಚಣಿದಾರರು ಕೂಡಲೇ ತಮ್ಮ ಪಿಂಚಣಿಯನ್ನು ಈ ಬ್ಯಾಂಕ್‍ಗಳಿಗೆ ವರ್ಗಾವಣೆ ಮಾಡಿಕೊಳ್ಳಬೇಕು. ಆಗಸ್ಟ್ 2020 ರಿಂದ ಈ ಬ್ಯಾಂಕ್‍ಗಳಲ್ಲಿ ಮಾತ್ರ ಪಿಂಚಣಿ ಪಾವತಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ