ಇಂದಿರಾ ಕ್ಯಾಂಟೀನ್ಗಳಿಗೆ ಬರೋದಕ್ಕೆ ಭಯ ಪಡುತ್ತಿರೋ ಜನ

ಬುಧವಾರ, 12 ಜುಲೈ 2023 (14:20 IST)
ಸಿಎಂ  ಕನಸಿನ ಕೂಸಾಗಿರುವ ಇಂದಿರಾ ಕ್ಯಾಂಟೀನ್   ಬಡವರ ಪಾಲಿನ ಫೈವ್ ಸ್ಟಾರ್ ಹೋಟೆಲ್ ಅಂತ ಹೇಳಿದ್ರೆ ತಪ್ಪಾಗಲ್ಲ, ದಿನನಿತ್ಯ ಸಾವಿರಾರು ಬಡ ಜನರ ಹೊಟ್ಟೆ ತುಂಬಿಸುತ್ತಿದ್ದೆ. ಇಂದಿರಾ ಕ್ಯಾಂಟೀನ್ ಗಳು ಆರಂಭವಾಗಿ 7-8 ವರ್ಷ ಕಳಿತ ಬಂತು ಕಳೆದ ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ಐದು ವರ್ಷಗಳ ಕಾಲ ಇಂದಿರಾಕ್ಯಾಂಟಿನಗಳು ಚೆನ್ನಾಗಿಯೆ ನಡೆದಿದ್ದವು ಬಳಿಕ ಸಮ್ಮಿಶ್ರ ಸರ್ಕಾರದಲ್ಲಿ ಅನುದಾನದ ಕೊರತೆಯಿಂದ ಕ್ಯಾಂಟೀನ್ಗಳು ಅಷ್ಟಕಷ್ಟೆ ನಡಿತಾ ಇದ್ದವು, ಸಮ್ಮಿಶ್ರ ಸರ್ಕಾರದ ಪತನದ ನಂತರ ಸಂಪೂರ್ಣವಾಗಿ ಇಂದಿರಾ ಕ್ಯಾಂಟೀನ್ ಗಳು ಮುಚ್ಚಲಾಯಿತು. ಇದೀಗ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಇಂದಿರಾ ಕ್ಯಾಂಟಿನ್ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯ ಮೊನ್ನೆಯಷ್ಟೇ ಬಜೆಟ್‌ನಲ್ಲಿ 100 ಕೋಟಿ ಬಿಡುಗಡೆ ಮಾಡಿದ್ದು ಇಂದಿರಾ ಕ್ಯಾಂಟಿನ್ಗಳು  ಮತ್ತೆ ಮರುಜೀವ ಪಡೆದಿವೆ.

ಆದರೆ ಸರಿಯಾದ ನಿರ್ವಹಣೆ ಇಲ್ಲದ ಕಾರಣ ಇಂದಿರಾ ಕ್ಯಾಂಟೀನ್ಗಳಿಗೆ ಬರೋ ಜನ ಭಯಪಡುವಂತಾಗಿದೆ, ಇಂದಿರಾ ಕ್ಯಾಂಟೀನ್ಗಳಲ್ಲಿ ಆಹಾರದ ಗುಣಮಟ್ಟ ಸರಿ ಇರೋದಿಲ್ಲ ಮತ್ತು ಇಂದಿರಾ ಕ್ಯಾಂಟೀನ್ಗಳು ಸರಿಯಾದ ನಿರ್ವಹಣೆ ಇಲ್ಲದ ಕಾರಣ ಸ್ವಲ್ಪಮಳೆ ಬಂದರು ಮಳೆ ನೀರು ಒಳಗೆ ಬರುತ್ತೆ. ಹೀಗಾಗಿ ಗೋಡೆಗಳು ಹಸಿ ಯಾಗೊದರಿಂದಿ ಕುಸಿಯುವ ಸಾಧ್ಯತೆ ಇರುತ್ತದೆ. ಹೀಗಾಗಿ ಜನ ಒಳಗೆ ಬಂದು ಊಟ ಮಾಡೋಕೆ ಜನ ಭಯ ಪಡುತ್ತಿದ್ದಾರೆ. ಇದರ ಬಗ್ಗೆ ಸಾಕಷ್ಟು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರು ಕೂಡ ಅಧಿಕಾರಿಗಳು ಇತ್ತ ತಿರುಗಿ ನೋಡುತ್ತಿಲ್ಲ. ಇಂದಿರಾ ಕ್ಯಾಂಟೀನ್ಗಳಿಂದ ಬಡವರಿಗೆ ಕೂಲಿ ಕಾರ್ಮಿಕರಿಗೆ ತುಂಬಾ ಸಹಾಯಕವಾಗಿದೆ ಜನ ನಿರ್ಭಿತಿ ಇಂದ ಬರುವಂತಾಗಬೇಕು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ