ಯಾರೇ ನೀ ಬುಲ್ ಬುಲ್ ಎನ್ನುತ್ತಿದ್ದ ಕಾಮುಕನಿಗೆ ಬಿತ್ತು ಧರ್ಮದೇಟು

ಶುಕ್ರವಾರ, 22 ಸೆಪ್ಟಂಬರ್ 2017 (15:06 IST)
ಮದ್ಯ ಸೇವಿಸಿದ ಮತ್ತಿನಲ್ಲಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಜನರು ಧರ್ಮದೇಟು ನೀಡಿದ ಘಟನೆ ವರದಯಾಗಿದೆ.
ಜಿಲ್ಲೆಯ ಸವದತ್ತಿ ತಾಲೂಕಿನ ಅರಳಿಗಿಡ ಓಣಿಯಲ್ಲಿ ಮಹಿಳೆಯರನ್ನು ಕಂಡಕೂಡಲೇ ಯಾರೇ ನೀ ಬುಲ್‌ಬುಲ್ ಎನ್ನುತ್ತಿದ್ದ ಕಾಮುಕ ದಾವುಲ್ ಉಸ್ತಾನ್‌ಗೆ ಜನತೆ ಮನಬಂದಂತೆ ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ.
 
ಆರೋಪಿ ದಾವುಲ್‌ನನ್ನು ಪೊಲೀಸರಿಗೊಪ್ಪಿಸುವ ಮೊದಲ ಅರೆಬೆತ್ತಲೆ ಮೆರವಣಿಗೆ ಮಾಡಿ ಥಳಿಸಿ ನಂತರ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಪ್ರತಿನಿತ್ಯ ಮದ್ಯ ಸೇವಿಸುತ್ತಿದ್ದ ದಾವುಲ್ ಉಸ್ತಾನ್, ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೇ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸುತ್ತಿದ್ದ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ