ಸಾಹಿತ್ಯ ಸಮ್ಮೇಳನದಲ್ಲಿ ವೇದಿಕೆಗಿಂತ ಕೆಳಗೆ ಕುಣಿದವರೇ ಹೆಚ್ಚು

ಭಾನುವಾರ, 4 ಡಿಸೆಂಬರ್ 2016 (09:58 IST)
ರಾಯಚೂರು: ಇಲ್ಲಿ ನಡೆಯುತ್ತಿರುವ 82 ನೇ ಸಾಹಿತ್ಯ ಸಮ್ಮೇಳನದಲ್ಲ ಬಿರು ಬಿಸಿಲನ್ನೂ ಲೆಕ್ಕಿಸದೆ ಜನ ಆಗಮಿಸುತ್ತಿದ್ದಾರೆ. ವೇದಿಕೆಯಲ್ಲಿ ಸಾಂಸ್ಕ್ರತಿಕ ಕಾರ್ಯಕ್ರಮದ ಅಂಗವಾಗಿ ನೃತ್ಯ ಕಾರ್ಯಕ್ರಮ ನಡೆಯುತ್ತಿದ್ದರೆ, ಕನ್ನಡದ ಕಾರ್ಯಕರ್ತರು ವೇದಿಕೆಯ ಕೆಳಗೇ ಟಪ್ಪಾಂಗುಚ್ಚಿ ಸ್ಟೆಪ್ಸ್ ಹಾಕಿ ನೆರೆದವರ ಮನಸೆಳೆದರು.

ಶನಿವಾರ 1 ಲಕ್ಷಕ್ಕೂ ಅಧಿಕ ಮಂದಿ ಸಾಹಿತ್ಯ ಸಮ್ಮೇಳನಕ್ಕೆ ಸಾಕ್ಷಿಯಾದರು. ಭಾನುವಾರ ರಜಾ ದಿನವಾದ್ದರಿಂದ ಇಂದು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುವ ಸಾಧ್ಯತೆಯಿದೆ. ರಾಯಚೂರಿನಲ್ಲಿ ಯಾವತ್ತೂ ಜನ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದನ್ನು ಯಾರೂ ನೋಡಿಲ್ಲವಂತೆ. ಅಷ್ಟೊಂದು ಜನ ಸೇರಿದ್ದರ ಬಗ್ಗೆ ಖುಷಿಯಿದೆ ಎಂದಿದ್ದಾರೆ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮನು ಬಳಿಗಾರ್.

ಇದೇ ವೇಳೆ ಮುಂದಿನ ಸಾಹಿತ್ಯ ಸಮ್ಮೇಳನ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುವುದು ಬಹುತೇಕ ಖಚಿತವಾಗಿದೆ. ಶನಿವಾರ ನಡೆದ ಕಸಾಪ ಕಾರ್ಯಕಾರಿ ಸಮಿತಿಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಇದರೊಂದಿಗೆ 26 ವರ್ಷಗಳ ಬಳಿಕ ಮೈಸೂರಿನಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ