ಜನರು ಕಣ್ಣೀರಲ್ಲಿ ಕೈ ತೊಳೆಯುತ್ತಿರುವಾಗ ಹಾರ ತುರಾಯಿ ಹಾಕಿ, ಕೇಕ್ ಕತ್ತರಿಸಿ ವಿಜೃಂಭಣೆ ಮಾಡುವುದು ಬೇಡ.ಅಭಿಮಾನಿಗಳು, ಕಾರ್ಯಕರ್ತರು ಹಣ ಖರ್ಚು ಮಾಡಿಕೊಂಡು ನನ್ನಲ್ಲಿಗೆ ಬರುವುದು ಬೇಡ.ನೀವಿದ್ದಲ್ಲಿಯೇ ಬಡವರಿಗೆ, ದೀನ ದಲಿತರಿಗೆ, ಮಳೆ-ನೆರೆಯಿಂದ ತತ್ತರಿಸಿದ ಜನರಿಗೆ ನೆರವಾಗಿ.ನನ್ನ ಮೇಲೆ ಅಭಿಮಾನ ಇರುವ ಹಾಗೂ ನನಗೆ ಪ್ರೀತಿ ತೋರುವ ಎಲ್ಲರೂ ನನ್ನ ಈ ಮನವಿಗೆ ಸ್ಪಂದಿಸುವಿರಿ ಎಂದು ಟ್ವೀಟ್ ಮಾಡಿದ್ದಾರೆ.