ಬಿಜೆಪಿಯವರು ಜೈಲಿಗೆ ಹೋಗಿ ಬಂದವರೆನ್ನುವುದು ಜನತೆಗೆ ಗೊತ್ತಿದೆ: ಎಚ್.ಎಂ.ರೇವಣ್ಣ

ಗುರುವಾರ, 12 ಅಕ್ಟೋಬರ್ 2017 (20:39 IST)
ಬಿಜೆಪಿಯವರು ಜೈಲಿಗೆ ಹೋಗಿ ಬಂದವರೆನ್ನುವುದು ಜನತೆಗೆ ಗೊತ್ತಿದೆ ಎಂದು ಸಾರಿಗೆ ಖಾತೆ ಸಚಿವ ಎಚ್.ಎಂ.ರೇವಣ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಜೈಲಿಗೆ ಹೋಗಿ ಬಂದವರೆನ್ನುವುದು ಜನತೆಗೆ ಗೊತ್ತಿದೆ. ಆದ್ದರಿಂದ ಮುಂಬರುವ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.
 
ಡಿಸಿಎಂ ಹುದ್ದೆ ವಿಚಾರ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದು. ರಾಜ್ಯದ ನಾಯಕರಿಗೆ ಡಿಸಿಎಂ ಹುದ್ದೆಯ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಸೂಕ್ತ ಸಮಯದಲ್ಲಿ ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು. 
 
ಚುನಾವಣೆ ಬಂದಾಗ ಪಕ್ಷಾಂತರ ಪರ್ವ ನಡೆಯುವುದು ಸಹಜ. ಬಿಜೆಪಿಯ ಅಪರೇಶನ್ ಕಮಲದಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದು ತಿಳಿಸಿದ್ದಾರೆ. 
 
ಸಿಎಂ ಸಿದ್ದರಾಮಯ್ಯ ಮತ್ತು ಅವರ ಪುತ್ರ ಡಾ.ಯತೀಂದ್ರ ಅವರ ವಿರುದ್ಧ ಬಿಜೆಪಿ ನಾಯಕರು ಮಾಡಿರುವ ಭೂ ಹಗರಣದ ಆರೋಪಗಳು ಸುಳ್ಳಿನ ಕಂತೆಯಾಗಿವೆ. ಭೂಮಿಯ ಮಾಲೀಕರೆ ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ಮುಖಂಡ ಬಿ.ಜಿಟಪುಟ್ಟಸ್ವಾಮಿ ವಿರುದ್ಧ ಛೀಮಾರಿ ಹಾಕಿದ್ದಾರೆ ಎಂದು ತಿರುಗೇಟು ನೀಡಿದರು. 
 
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬೆಂಗಳೂರಿಗೆ ಬಂದು ಹೋದ ನಂತರ, ಬಿಜೆಪಿ ಮುಖಂಡರು ಸಿಎಂ ವಿರುದ್ಧ ಆರೋಪಗಳನ್ನು ಮಾಡಲು ಆರಂಭಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಕುಂಭಕರ್ಣ ನಿದ್ರೆಯಲ್ಲಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಎಚ್ಚರಿಸಿದ್ದಾರೆ ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ