ನಗರದ ತಾಲೂಕು ಕಚೇರಿಯಲ್ಲಿ ಬುಧವಾರ ಜನರಿಲ್ಲದೆ ಬಿಕೋ ಎನ್ನುತ್ತಿತು.ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿದೆ. ಅಧಿಕಾರಿಗಳು ಚುನಾವಣಾಪೂರ್ವ ತಯಾರಿಯಾಗಿ ಸಕಲ ಸಿದ್ಧತೆಯಲ್ಲಿ ತೊಡಗಿದ್ದಾರೆ. ಈ ಹಿನ್ನೆಲೆ ಸಾರ್ವಜನಿಕರ ಕೆಲಸ ಕಾರ್ಯಗಳು ನೇಪಥ್ಯಕ್ಕೆ ಸರಿದಿವೆ. ಚುನಾವಣೆ ಮುಗಿಯುವವರೆಗೂ ತಮ್ಮ ಕೆಲಸ ಕಾರ್ಯಗಳು ಆಗುವುದಿಲ್ಲ ಎಂಬುದು ಮನಗಂಡ ಸಾರ್ವಜನಿಕರು ಮತ್ತು ಗ್ರಾಮೀಣ ಭಾಗದ ರೈತರು ತಾಲೂಕು ಕಚೇರಿಗೆ ಭೇಟಿಗೆ ತಾತ್ಕಾಲಿಕ ವಿರಾಮ ನೀಡಿದ್ದಾರೆ.