ಮಳೆಗೆ ಜನರ ಜೀವನ ಅಸ್ತವ್ಯಸ್ತ
ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕರುನಾಡಿನಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ.ಅದರಂತೆ ವರುಣನ ಕಡು ಕೋಪಕ್ಕೆ ಮಂಡ್ಯ ಜಿಲ್ಲೆಯ ಜನರು ತತ್ತರಿಸಿ ಹೋಗಿದ್ದಾರೆ. ತಡ ರಾತ್ರಿ ಸುರಿದ ಭಾರೀ ಮಳೆಗೆ ಜನರ ಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಎರಡು ಕಿಲೋ ಮೀಟರ್‌ವರೆಗೂ ರಸ್ತೆಯಲ್ಲೇ ನೀರು ನಿಂತಿದೆ. ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚಾರ ನಡೆಸುತ್ತಿದ್ದಾರೆ. ರಾಷ್ಟ್ರೀಯ ದಶಪಥ ಅವೈಜ್ಞಾನಿಕ ಹೆದ್ದಾರಿ ನಿರ್ಮಾಣವೇ ಈ ಅವಘಡಕ್ಕೆ ಕಾರಣವೆಂದು ಆರೋಪ ಮಾಡಲಾಗಿದ್ದು, ಮಂಡ್ಯ ಜನರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಹನ ಸವಾರರು ಮಂಡ್ಯದ ಇಂಡವಾಳು ಬಳಿ ನಿಂತಿರುವ ನೀರಿನಿಂದ ರೋಸಿ ಹೋಗಿದ್ದಾರೆ.