ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲವೆಂದ ಮೇಲೆ ಜನಸಾಮಾನ್ಯರ ಗತಿಯೇನು: ಬಿಜೆಪಿ

Sampriya

ಬುಧವಾರ, 25 ಡಿಸೆಂಬರ್ 2024 (15:51 IST)
ಬೆಂಗಳೂರು: ರಾಜರಾಜೇಶ್ವರಿ ನಗರ ಶಾಸಕರಾದ ಮುನಿರತ್ನ ಅವರ ಮೇಲೆ ಗೂಂಡಾಗಳು ಹಲ್ಲೆ ನಡೆಸಿರುವುದು ಖಂಡನೀಯ ಎಂದು ಬಿಜೆಪಿ ಆಕ್ರೋಶ ಹೊರಹಾಕಿದೆ.

ಇಂದು ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ರಾಜ್ಯ  ಕಾಂಗ್ರೆಸ್‌ ಸರ್ಕಾರದ ಆಡಳಿತದ ವಿರುದ್ಧ ಆಕ್ರೋಶ ಹೊರಹಾಕಿ ಬಿಜೆಪಿ ಪೋಸ್ಟ್ ಹಾಕಿದೆ.

ರಾಜರಾಜೇಶ್ವರಿ ನಗರ ಶಾಸಕರಾದ ಮುನಿರತ್ನ ಅವರ ಮೇಲೆ ಗೂಂಡಾಗಳು ಹಲ್ಲೆ ನಡೆಸಿರುವುದು ಖಂಡನೀಯ. ಕಾಂಗ್ರೆಸ್‌ ಸರ್ಕಾರದ ಆಡಳಿತಾವಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತಾಳಕ್ಕೆ ಕುಸಿದಿರುವುದಕ್ಕೆ ದಿನನಿತ್ಯವೂ ವರದಿಯಾಗುತ್ತಿರುವ ಪ್ರಕರಣಗಳೇ ಸಾಕ್ಷಿಯಾಗಿದೆ.

ಕೆಲವೇ ದಿನಗಳ ಹಿಂದೆ ಶಕ್ತಿಸೌಧದೊಳಗೆ ರೌಡಿಗಳನ್ನು ಒಳಬಿಟ್ಟು ಪರಿಷತ್‌ ಸದಸ್ಯರ ಮೇಲೆ ಹಲ್ಲೆ ಮಾಡಿಸಿದ್ದ ಕಾಂಗ್ರೆಸ್‌  ಸರ್ಕಾರ ಈಗ ಜನಪ್ರತಿನಿಧಿಯೊಬ್ಬರ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿಸಿದೆ. ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲವೆಂದ ಮೇಲೆ ಜನಸಾಮಾನ್ಯರ ಗತಿಯೇನು?

ಸರ್ಕಾರಿ ಪ್ರಾಯೋಜಿತ ಹಲ್ಲೆ, ದಾಳಿಗಳ ಮೂಲಕ ದ್ವೇಷದ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ