ಸಿದ್ದಗಂಗಾ ಶ್ರೀಗಳ ಆರೋಗ್ಯದ ಬಗ್ಗೆ ಜನರಿಗೆ ಆತಂಕ ಬೇಡ- ಸಿಎಂ ಹೆಚ್.ಡಿ. ಕುಮಾರಸ್ವಾಮಿ

ಶುಕ್ರವಾರ, 7 ಡಿಸೆಂಬರ್ 2018 (11:16 IST)
ಚಿಕ್ಕಮಗಳೂರು : ಸಿದ್ದಗಂಗಾ ಶ್ರೀಗಳ ಆರೋಗ್ಯದ ಬಗ್ಗೆ ಜನರಿಗೆ ಆತಂಕ ಬೇಡ ಎಂದು ರಾಜ್ಯದ ಜನತೆಗೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.


ಚಿಕ್ಕಮಗಳೂರಿನ ಶೃಂಗೇರಿ ಶಾರದಾಂಬೆಯ ಸನ್ನಿಧಿಗೆ ಭೇಟಿ ನೀಡಿ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮಠದ ಕಿರಿಯ ಸ್ವಾಮೀಜಿ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಹೆಚ್ಚಿನ ಚಿಕಿತ್ಸೆಗೆ ಚೆನ್ನೈ ಆಸ್ಪತ್ರೆಗೆ ಕರೆದುಕೊಂಡು ಹೋಗಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದ್ದಾರೆ.


ಸಿದ್ದಗಂಗಾ ಶ್ರೀಗಳಿಗೆ ಹಲವಾರು ವೈದ್ಯರು ಹಾಗೂ ತಜ್ಞರ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ. ಸರ್ಕಾರ ಆಸ್ಪತ್ರೆಯ ವೆಚ್ಚವನ್ನು ಭರಿಸಲಿದೆ. ರಾಜ್ಯದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸರಿಗೆ ಎಲ್ಲಾ ರೀತಿಯ ಸಹಕಾರಕ್ಕೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ