ಅವರು ಇಂದು ವಿಧಾನ ಪರಿಷತ್ತಿನಲ್ಲಿ ಶಾಸಕ ಪುಟ್ಟಣ್ಣ ಅವರು ಸೇಕ್ಷನ್ 72ರ ಅಡಿಯಲ್ಲಿ ಮಂಡಿಸಿದ ಗಮನ ಸೇಳೆಯು ಸೂಚನೆಗೆ ಉತ್ತರಿಸಿದರು. ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳಿಗೆ ಹೆಚ್ಚಿ ಪ್ರೋತ್ಸಾಹ ನೀಡಲಾಗುತ್ತಿದೆ. ಡೈಸ್ ಸಂಸ್ಥೆಯ ಕಳೆದ 16 ವರ್ಷಗಳಿಂದ ತನ್ನ ವರದಿಯನ್ನು ಇಲಾಖೆಗೆ ಸಲ್ಲಿಸುತ್ತಿದ್ದು, ಈ ವರ್ಷದಿಂದ ಜಾರಿಗೊಳಿಸಲಾಗುತ್ತಿದೆ.
ರಾಜ್ಯದಲ್ಲಿ 34 ಶೈಕ್ಷಣಿಕ ಜಿಲ್ಲೆಗಳು, 234 ಶೈಕ್ಷಣಿಕ ತಾಲೂಕುಗಳು ಮತ್ತು 3600 ಕ್ಲಸ್ಟರ್‍ಗಳಿವೆ. ಈಗ ನೇಮಿಸಿರುವ ಬಿಆರ್‍ಸಿ ಮತ್ತು ಎಆರ್‍ಸಿಗಳು ಅಧಿಕಾರಿಗಳಂತೆ ವರ್ತಿಸುತ್ತಿದ್ದು, ಆದರೆ ಅವರು ಅಧಿಕಾರಿಗಳಲ್ಲ, ಅವರನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಸಂಪನ್ಮೂಲ ವ್ಯಕ್ತಿಗಳನ್ನಾಗಿ ನೇಮಿಸಲಾಗಿದೆ.
ಬರುವ ಡಿಸೆಂಬರ್ 15ರ ನಂತರ ಹೊಸ ಶಾಲೆಗಳ ಪ್ರಾರಂಭಕ್ಕೆ ಅನುಮತಿ ಕೊಡಲಾಗುವುದು. ಮತ್ತು ಈಗಿರುವ ಶಾಲೆಗಳ ಉನ್ನತಿಕರಣಕ್ಕೆ ಆದ್ಯತೆ ನೀಡಲಾಗುವುದು. ಶಿಕ್ಷಣ ಕಿರಣ ಕಾರ್ಯಕ್ರಮದ ಮೂಲಕ ಪ್ರತಿ ವಿದ್ಯಾರ್ಥಿಯ 1 ರಿಂದ 10 ನೇ ತರಗತಿಯವರಗಿನ ಶೈಕ್ಷಣಿಕ ದಾಖಲೆಗಳನ್ನು ವ್ಯವಸ್ಥಿತ ರೀತಿಯಲ್ಲಿ ದಾಖಲಿಸಲಾಗಿದೆ. ಶಾಲೆಗಳ ಅನುದಾನ ಹಿಂಪಡೆಯುವ ಸಂದರ್ಭದಲ್ಲಿ ಅದಕ್ಕಾಗಿ ಪೂರಕ ವ್ಯವಸ್ಥೆ ಮಾಡಲಾಗುತ್ತದೆ ಎಂದು ಸಚಿವರು ಸದನಕ್ಕೆ ತಿಳಿಸಿದರು.