ಸರ್ಕಾರಿ ಶಾಲೆಗಳಲ್ಲಿ ಗಣೇಶ ಕೂರಿಸಲು ಅನುಮತಿ
ಹಿಜಾಬ್ ವಿವಾದದ ನಂತರ ಕರ್ನಾಟಕದಲ್ಲಿ ಒಂದಲ್ಲ ಒಂದು ಕಾರಣಕ್ಕೆ ಧಾರ್ಮಿಕ ಅಂಶಗಳು ಚರ್ಚೆಗೆ ಗ್ರಾಸವಾಗುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಗೌರಿ-ಗಣೇಶ ಹಬ್ಬದ ಬಗ್ಗೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವೂ ವ್ಯಾಪಕ ಚರ್ಚೆಗೆ ಗುರಿಯಾಗುವ ಸಾಧ್ಯತೆ ನಿಚ್ಚಳವಾಗಿದೆ. ಈಗಾಗಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಶಿಕ್ಷಕರ ಮಟ್ಟದಲ್ಲಿ ಈ ಸೂಕ್ಷ್ಮ ಸಂದರ್ಭದಲ್ಲಿ ಇಂಥದ್ದೊಂದು ಕ್ರಮದ ಅಗತ್ಯವಿತ್ತೇ ಎಂಬ ಚರ್ಚೆ ಆರಂಭವಾಗಿದೆ. ಶಾಲೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದ್ದು, ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.