ವೈಯಕ್ತಿಕ ತೇಜೋವಧೆ ಸರಿಯಲ್ಲ-ರೋಹಿಣಿ ಸಿಂಧೂರಿ

ಸೋಮವಾರ, 20 ಫೆಬ್ರವರಿ 2023 (17:11 IST)
ತಮ್ಮ ಮೇಲೆ ಐಪಿಎಸ್ ಮಹಿಳಾ ಅಧಿಕಾರಿ ಡಿ ರೂಪಾ ಮೌದ್ಗಿಲ್ ಮಾಡಿರುವ ಆರೋಪಕ್ಕೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಇಂದು ಮಾಧ್ಯಮ ಪ್ರತಿನಿಧಿಗಳ ಮುಂದೆ ಪ್ರತಿಕ್ರಿಯಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ತಮ್ಮ ನಿವಾಸದ ಹೊರಗೆ ಮಾಧ್ಯಮ ಪ್ರತಿನಿಧಿಗಳು ಪ್ರತಿಕ್ರಿಯೆ ಕೇಳಿದಾಗ, ಈ ರೀತಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಮಹಿಳಾ ಅಧಿಕಾರಿಯೊಬ್ಬರು ನನ್ನ ಮೇಲೆ ವೈಯಕ್ತಿಕವಾಗಿ ಕೀಳು ಮಟ್ಟದಲ್ಲಿ ತೇಜೋವಧೆ ಮಾಡುತ್ತಿರುವುದು ಸರಿಯಲ್ಲ, ಇದನ್ನು ಇಲ್ಲಿಗೇ ಬಿಡುವ ಪ್ರಶ್ನೆಯಿಲ್ಲ, ಅವರು ತಮ್ಮ ವರ್ತನೆಯನ್ನು ಮುಂದುವರಿಸಿದರೆ ಖಂಡಿತಾ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದಿದ್ದಾರೆ.
ಈ ಬಗ್ಗೆ ನನ್ನ ಪತಿ ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಹೇಳುತ್ತಿರುವುದೂ ಅದನ್ನೇ, ಮುಂದೆ ಏನು ಮಾಡಬೇಕೋ ನಿರ್ಧರಿಸುತ್ತೇವೆ ಎಂದಷ್ಟೇ ರೋಹಿಣಿ ಸಿಂಧೂರಿ ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ