ಕುಡಿಯುವ ನೀರಿಗೆ ಕೀಟನಾಶಕ ಬೆರೆಸಿದ ಪ್ರಕರಣ; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ

ಗುರುವಾರ, 10 ಜನವರಿ 2019 (12:21 IST)
ಬೆಂಗಳೂರು : ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ಗೆ  ಕೀಟನಾಶಕ ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚಿಸಿದ್ದಾರೆ.


ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ಗೆ  ದುಷ್ಕರ್ಮಿಗಳು ಕ್ರಿಮಿನಾಶಕ ಬೆರೆಸಿದ ಪರಿಣಾಮ ಐವರು ಅಸ್ವಸ್ಥರಾಗಿದ್ದು ಕೆಂಬಾವಿ ಆಸ್ಪತ್ರೆಗೆ ದಾಖಲಾಗಿದ್ದರು. ಅದರಲ್ಲಿ ಪಂಪ್ ಆಪರೇಟರ್ ಮೌನೇಶ್ ತಾಯಿ ಹೊನ್ನಮ್ಮ ಚಿಕಿತ್ಸೆ ಫಲಕಾರಿಯಾಗದೆ ರಕ್ತವಾಂತಿ ಆಗಿ ಇಂದು ಮೃತಪಟ್ಟಿದ್ದಾರೆ.


ಈ ಘಟನೆ ನಡೆದ ಹಿನ್ನಲೆಯಲ್ಲಿ ಸಿಎಂ ಕುಮಾರಸ್ವಾಮಿ ಯಾದಗಿರಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಂದ ವಿವರ ಪಡೆದು ಕೂಡಲೇ ಸ್ಥಳ ಪರಿಶೀಲಿಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಅಲ್ಲದೇ ಈ ಪ್ರಕರಣದ ಬಗ್ಗೆ ತ್ವರಿತ ತನಿಖೆ ನಡೆಸಿ ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ