ಬೆಂಗಳೂರು ಕಂಬಳ ನಿಲ್ಲಿಸುವಂತೆ ಹೈಕೋರ್ಟ್‌ ಮೊರೆ ಹೋದ ಪೆಟಾ

Sampriya

ಸೋಮವಾರ, 21 ಅಕ್ಟೋಬರ್ 2024 (16:20 IST)
Photo Courtesy X
ಬೆಂಗಳೂರು: ಇದೇ 26ರಂದು ಬೆಂಗಳೂರಿನಲ್ಲಿ ನಿಗಧಿಯಾಗಿದ್ದ ಕಂಬಳವನ್ನು ನಿಲ್ಲಿಸುವಂತೆ ಪ್ರಾಣಿ ದಯಾ ಸಂಘ ಪೇಟಾ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದೆ. ಇದರಿಂದ ಅಕ್ಟೋಬರ್ 26 ರಂದು ಬೆಂಗಳೂರಿನಲ್ಲಿ ಕಂಬಳ ನಡೆಯುವುದು ಬಹುತೇಕ ಅನುಮಾನವಾಗಿದೆ.

ಅಕ್ಟೋಬರ್ 26 ರಂದು ಬೆಂಗಳೂರಿನಲ್ಲಿ ಕಂಬಳ ನಡೆಯಲಿದೆ ಎಂದು ಪೇಟಾ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ಈ ಅರ್ಜಿಯ ತುರ್ತು ವಿಚಾರಣೆಗೆ ಪರಿಗಣಿಸುವಂತೆ ಸೋಮವಾರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಅವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ಪೀಠಕ್ಕೆ ಮನವಿ ಮಾಡಿದ್ದಾರೆ.

ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಪ್ರಾದಾಯಿಕವಾಗಿ ನಡೆಯುವ ಕಂಬಳವನ್ನು ಇದೇ ತಿಂಗಳು ಬೆಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ರಾಜ್ಯದ ವಿವಿಧ ಭಾಗಗಳಿಂದ ಕೋಣಗಳನ್ನು ಕರೆತರಲಾಗುತ್ತದೆ. ಕಂಬಳ ಒಂದು ಪ್ರಾಣಿ ಹಿಂಸಾ ಕೃತ್ಯವಾಗಿದೆ’ ಎಂದು ಪೀಠಕ್ಕೆ ತಿಳಿಸಿದರು.

‘ಅಕ್ಟೋಬರ್ 26ಕ್ಕೆ ಕಂಬಳ ಸ್ಪರ್ಧೆ ಆಯೋಜಿಸಲಾಗಿದೆ ಎನ್ನುತ್ತಿದ್ದೀರಿ. ಕೊನೆಯ ಕ್ಷಣದಲ್ಲಿ ನ್ಯಾಯಾಲಯದ ಮುಂದೆ ಬಂದಿರುವುದೇಕೆ?’ ಎಂದು ಪೀಠ ಪ್ರಶ್ನಿಸಿದೆ.

ಈ ಸಂಬಂಧ ಜುಲೈನಲ್ಲಿಯೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಅದನ್ನು ಇನ್ನೂ ವಿಚಾರಣೆಗೆ ನಿಗದಿಪಡಿಸಲಾಗಿಲ್ಲ. ಆದರೆ ಇದೀಗ ಇದೇ 26ಕ್ಕೆ ಕಂಬಳ ಸ್ಪರ್ಧೆ ಆಯೋಜನೆಯಾಗಿದ್ದು, ತುರ್ತು ವಿಚಾರಣೆಗೆ ಪರಿಗಣಿಸಬೇಕಿದೆ ಎಂದು ವಕೀಲರು ತಿಳಿಸಿದರು.

ವಾದ ಆಲಿಸಿದ ಪೀಠ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.  ದೂಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ