ಅನರ್ಹ ಶಾಸಕರಿಂದ ಸುಪ್ರೀಂಗೆ ಅರ್ಜಿ ಸಲ್ಲಿಕೆ

ಗುರುವಾರ, 1 ಆಗಸ್ಟ್ 2019 (18:28 IST)
ಮೈತ್ರಿ ಸರಕಾರ ಪತನಕ್ಕೆ ಕಾರಣರಾಗಿ ಅನರ್ಹಗೊಂಡಿರೋ ಶಾಸಕರು ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಕಾಂಗ್ರೆಸ್ – ಜೆಡಿಎಸ್ ನ 15 ಶಾಸಕರು ಅನರ್ಹಗೊಂಡಿದ್ದರು. ಸ್ಪೀಕರ್ ಕ್ರಮ ಪ್ರಶ್ನಿಸಿ ಹಾಗೂ ತಮ್ಮ ವಿರುದ್ಧದ ಅನರ್ಹತೆ ಆದೇಶ ರದ್ದುಗೊಳಿಸುವಂತೆ ಕೋರಿ ಶಾಸಕರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಅನರ್ಹ ಶಾಸಕರಾದ ರಮೇಶ್ ಜಾರಕಿಹೊಳಿ, ಬಿ.ಸಿ.ಪಾಟೀಲ್, ಹೆಚ್.ವಿಶ್ವನಾಥ, ನಾರಾಯಣಗೌಡ, ಪ್ರತಾಪಗೌಡ ಪಾಟೀಲ, ಮಹೇಶ ಕಮಠಳ್ಳಿ, ಗೋಪಾಲಯ್ಯ, ಎಂಟಿಬಿ ನಾಗರಾಜ್, ಕೆ.ಸುಧಾಕರ, ಭೈರತಿ ಬಸವರಾಜು, ಎಸ್.ಟಿ.ಸೋಮಶೇಖರ್, ಮುನಿರತ್ನ, ಆರ್.ಶಂಕರ್, ಶ್ರೀಮಂತ ಪಾಟೀಲ್ ಸ್ಪೀಕರ್ ನಿರ್ಣಯದ ವಿರುದ್ಧ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಅನರ್ಹಗೊಂಡಿರುವ ಶಾಸಕರಾದ ಆನಂದ ಸಿಂಗ್, ರೋಷನ್ ಬೇಗ್ ಕೋರ್ಟ್ ಮೊರೆ ಹೋಗಿಲ್ಲ. ಇವರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬಹುದು ಎಂದು ಚರ್ಚೆಯಾಗುತ್ತಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ