ನಾಳೆ ಪೆಟ್ರೋಲ್ ಬಂಕ್ ಮಾಲೀಕರ ಮುಷ್ಕರ ಇಲ್ಲ

ಗುರುವಾರ, 12 ಅಕ್ಟೋಬರ್ 2017 (09:37 IST)
ಬೆಂಗಳೂರು: ವಾಹನ ಸವಾರರಿಗೆ ಪೆಟ್ರೋಲ್ ಬಂಕ್ ಮಾಲೀಕರು ಸಿಹಿ ಸುದ್ದಿ ನೀಡಿದ್ದಾರೆ. ನಾಳೆಯಿಂದ ಮುಷ್ಕರ ನಡೆಸಲು ತೀರ್ಮಾನಿಸಿದ್ದ ಪೆಟ್ರೋಲ್ ಬಂಕ್ ಮಾಲೀಕರು ಮುಷ್ಕರವನ್ನು ವಾಪಸ್ ಪಡೆದಿದ್ದಾರೆ.

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ನ್ನು ಜಿಎಸ್‍ಟಿ ವ್ಯಾಪ್ತಿಗೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಪೆಟ್ರೋಲ್-ಡೀಸೆಲ್ ಡೀಲರ್ಸ್ ಅಸೋಸಿಯೇಷನ್ ನಾಳೆ ದೇಶಾದ್ಯಂತ ಪೆಟ್ರೋಲ್ ಬಂಕ್ ಬಂದ್ ನಡೆಸಲು ನಿರ್ಧರಿಸಿತ್ತು. ಸರ್ಕಾರ ನಿತ್ಯ ದರದ ಪರಿಷ್ಕರಣೆ ಕೈ ಬಿಡಲು ಹಾಗೂ ಅಪೂರ್ಣ ಚಂದ್ರ ಕಮಿಟಿ ವರದಿ ಜಾರಿ ಮಾಡುವಂತೆ ಒತ್ತಾಯಿಸಿ ಮೂರುದಿನ ಪೆಟ್ರೋಲ್ ಬಂಕ್ ಬಂದ್ ಮಾಡಲು ಪೆಟ್ರೋಲ್ ಮಾಲೀಕರ ಸಂಘ ನಿರ್ಧರಿಸಿತ್ತು.

ಆದರೆ ತೈಲ ಕಂಪನಿಗಳು ಮಾತುಕತೆ ಗೆ ಮುಂದಾದ ಹಿನ್ನೆಲೆಯಲ್ಲಿ ಬಂಕ್ ಮಾಲೀಕರು ಈ ಮುಷ್ಕರವನ್ನು ಹಿಂದಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಒಂದು ವೇಳೆ ಕೇಂದ್ರ ಸರ್ಕಾರ ಪೆಟ್ರೋಲ್-ಡೀಸೆಲ್ ಅನ್ನು ಜಿಎಸ್‍ಟಿ ವ್ಯಾಪ್ತಿಗೆ ತೆಗೆದುಕೊಳ್ಳದಿದ್ದರೆ, ಅ. 27 ರಿಂದ ಅನಿರ್ಧಿಷ್ಟಾವಧಿ ಬಂದ್ ನಡೆಸುವುದಾಗಿ ಪೆಟ್ರೋಲ್ ಡೀಸೆಲ್ ಡೀಲರ್ಸ್ ಅಸೋಸಿಯೇಷನ್ ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ