ಪೆಟ್ರೋಲ್, ಡೀಸೆಲ್ & ಅಗತ್ಯ ವಸ್ತುಗಳ ಬೆಲೆ ಏರಿಕೆ
ಪೆಟ್ರೋಲ್, ಡೀಸೆಲ್ & ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನಲೆ ದಾವಣಗೆರಯಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ..ನಗರದ ಜಯದೇವ ವೃತ್ತದಲ್ಲಿ ಮಾಜಿ ಶಾಸಕ ಹೆಚ್.ಎಸ್.ಶಿವಶಂಕರ್ ನೇತೃತ್ವದಲ್ಲಿ ಪ್ರೊಟೆಸ್ಟ್ ನಡೆಸಲಾಯ್ತು..ಸಿಲಿಂಡರ್ ಹಿಡಿದು ಬೆಲೆ ಏರಿಕೆಯನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ರು..ಕೊರೊನಾದಿಂದ ಜನರು ತತ್ತರಿಸಿ ಹೋಗಿದ್ದಾರೆ..ಈ ನಡುವೆ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೆ ಏರಿವೆ..ಬೆಲೆ ಏರಿಕೆಯಿಂದ ಬಡವರು, ಮಧ್ಯಮ ವರ್ಗಗಳ ಕುಟುಂಬಗಳು ತತ್ತರಿಸಿ ಹೋಗಿವೆ..ಈ ವಿಷಯ ಬಗ್ಗೆ ಗಂಭೀರವಾಗಿ ಚಿಂತಿಸುವುದು ಬಿಟ್ಟು, ಸರ್ಕಾರ ಕೋಮು ಗಲಭೆ ಹಚ್ಚುವುದರಲ್ಲಿ ನಿರತವಾಗಿದೆ ಎಂದು ಆರೋಪ ಮಾಡಿದ್ರು.