ರಾಜ್ಯದಲ್ಲಿ ವಾಹನ ಸವಾರರಿಗೆ ಗುಡ್ ನ್ಯೂಸ್: ಪೆಟ್ರೋಲ್ ಬೆಲೆ ಇಳಿಕೆ

ಸೋಮವಾರ, 17 ಸೆಪ್ಟಂಬರ್ 2018 (10:32 IST)
ಬೆಂಗಳೂರು: ದೇಶದಲ್ಲಿ ತೈಲ ಬೆಲೆ ದಿನೇ ದಿನೇ ಏರಿಕೆಯಾಗುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಸಾಮಾನ್ಯ ಜನರ ಹೊರೆ ತಗ್ಗಿಸಲು ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆ ಮಾಡಿದೆ.

ಕುಲಬರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 2 ರೂ. ಇಳಿಕೆ ಮಾಡುವುದಾಗಿ ಘೋಷಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ದರ ಇಳಿಕೆ ಮಾಡಿ ದರ ಇಳಿಕೆ ಮಾಡಲಾಗಿದೆ.

ಈ ಮೊದಲು ಸಿಎಂ ಕುಮಾರಸ್ವಾಮಿ ಬಜೆಟ್ ನಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಯನ್ನು 2 ರೂ. ಗೆ ಏರಿಕೆ ಮಾಡಿದ್ದರು. ಇದೀಗ ದಿನೇ ದಿನೇ ಬೆಲೆ ಹೆಚ್ಚಳವಾಗುತ್ತಿರುವುದರಿಂದ ತೆರಿಗೆ ಇಳಿಕೆ ಮಾಡಿ ದರ ಇಳಿಕೆ ಮಾಡಲಾಗಿದೆ. ಈ ಬಗ್ಗೆ ನಿನ್ನೆಯೇ ಸಿಎಂ ಕುಮಾರಸ್ವಾಮಿ ಆರ್ಥಿಕ, ವ್ಯವಹಾರ ತಜ್ಞರೊಂದಿಗೆ ಚರ್ಚೆ ನಡೆಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ