ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಕೊಂಚ ಇಳಿಕೆ ! ಎಲ್ಲೇಲ್ಲಿ ಎಷ್ಟೆಷ್ಟು ದರ ಇದೆ ಗೊತ್ತಾ?
ಶುಕ್ರವಾರ, 12 ನವೆಂಬರ್ 2021 (14:42 IST)
ಕೇಂದ್ರ ಹಾಗೂ ರಾಜ್ಯ ಸರ್ಕಾರದ ದೀಪಾವಳಿ ಕೊಡುಗೆಯಾಗಿ ಪೆಟ್ರೋಲ್(Petrol), ಡೀಸೆಲ್(Diesel) ಮೇಲಿನ ಸುಂಕವನ್ನು ಕಡಿತಗೊಳಿಸಿದ್ದವು. ಇದರ ಪರಿಣಾಮವಾಗಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ.ಎಲ್ಪಿಜಿ ಬೆಲೆ (LPG) ಏರಿಕೆಯಿಂದ ಕಂಗಾಲಾಗಿದ್ದ ಜನ ದಿನನಿತ್ಯ ಏರುತ್ತಿದ್ದ ಪೆಟ್ರೋಲ್-ಡೀಸೆಲ್ ಬೆಲೆಯಿಂದಾಗಿ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದ್ದರು.
ಈ ಹಿನ್ನೆಲೆ ಜನ ಸಾಮಾನ್ಯರಿಗೆ ತೈಲ ದರದ ಹೊರೆ ಸ್ವಲ್ಪ ಕಡಿಮೆಯಾಗಿದೆ. ಆದರೆ, ಇಂದು ಬೆಂಗಳೂರಿ(Bengaluru)ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕಂಡಿದೆ. ಉಳಿದ ಹಲವು ಜಿಲ್ಲೆಗಳಲ್ಲಿ ಏರಿಳಿತ ಕಂಡಿದೆ. ಪ್ರಸ್ತುತ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಇಂದು 1 ಲೀಟರ್ ಪೆಟ್ರೋಲ್ ಅನ್ನು 100.58 ರೂಗೆ ಮಾರಾಟ ಮಾಡುತ್ತಿದ್ದರೆ, ಡೀಸೆಲ್ ಅನ್ನು 85.01 ರೂ. ಗೆ ಮಾರಾಟ ಮಾಡಲಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ಕುರಿತ ವಿವರ ಇಲ್ಲಿದೆ.
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರ ವಿವರ;