ಏರುಗತಿಯಲ್ಲಿ ಪೆಟ್ರೋಲ್, ಡೀಸೆಲ್ ದರ
ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗುತ್ತಿದೆ. ಮಾರ್ಚ್ 22ರಂದು ಆರಂಭವಾದ ಬೆಲೆ ಏರಿಕೆ ಓಟ ಇಂದು ಮತ್ತೆ ಮುಂದುವರಿದಿದೆ. ಇಂದು ಮತ್ತೆ ಪೆಟ್ರೋಲ್ ಬೆಲೆ ಲೀಟರ್ಗೆ 80 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್ಗೆ 70 ಪೈಸೆ ಏರಿಕೆ ಮಾಡಲಾಗಿದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿದಿನ ಎನ್ನುವಂತೆ ಏರುತ್ತಲೇ ಇದೆ. ದೆಹಲಿಯಲ್ಲಿಂದು ಲೀಟರ್ ಪೆಟ್ರೋಲ್ ಬೆಲೆ 80 ಪೈಸೆ ಏರಿಕೆಯಾಗಿದ್ದು, ಒಂದು ಲೀಟರ್ಗೆ ₹ 100.21 ಮುಟ್ಟಿದೆ. ಲೀಟರ್ ಡೀಸೆಲ್ ಬೆಲೆ 70 ಪೈಸೆ ಏರಿಕೆಯಾಗಿದ್ದು, ಬೆಲೆ ₹ 91.47 ತಲುಪಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ 85 ಪೈಸೆ, ಡೀಸೆಲ್ 75 ಪೈಸೆ ಏರಿಕೆ ಕಂಡಿದೆ.